ಶುಕ್ರವಾರ, ಏಪ್ರಿಲ್ 10, 2020
19 °C

ಹೊನಲು ಬೆಳಕಿನ ಕ್ರಿಕೆಟ್‌ ಟೂರ್ನಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ: ಐಪಿಎಲ್‌ ಮಾದರಿಯಲ್ಲಿ ಹೊನಲು ಬೆಳಕಿನ ಕ್ರಿಕೆಟ್‌ ಟೂರ್ನಿಯನ್ನು ಏ.16ರಿಂದ 19ರವರೆಗೆ ಹಳೆ ಮಾಧ್ಯಮಿಕ ಶಾಲಾ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ದುರ್ಗನ್ಸ್‌ ಕ್ರಿಕೆಟ್‌ ಅಸೋಸಿಯೇಷನ್‌ ಅಧ್ಯಕ್ಷ ಕೆ.ಜಿ.ಟಿ. ಗುರುಮೂರ್ತಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಲೀಗ್‌ ಮಾದರಿಯ ಕ್ರಿಕೆಟ್‌ ಟೂರ್ನಿ ಇದಾಗಿದ್ದು, 2019ರಲ್ಲಿ 10 ತಂಡಗಳು ಪಾಲ್ಗೊಂಡಿದ್ದವು. ಕ್ರಿಕೆಟ್‌ ಪ್ರೇಮಿಗಳ ಬೇಡಿಕೆಯ ಮೇರೆಗೆ 12 ತಂಡಗಳನ್ನು ಆಯ್ಕೆ ಮಾಡಲಾಗುತ್ತಿದೆ. ಪ್ರತಿ ತಂಡಕ್ಕೆ ಫ್ರಾಂಚೈಸಿ ಮಾಲಿಕತ್ವ ನೀಡಲಾಗುತ್ತದೆ. ತಂಡದಲ್ಲಿ ಪಾಲ್ಗೊಳ್ಳುವ ಆಟಗಾರರಿಗೆ ಹರಾಜು ಪ್ರಕ್ರಿಯೆ ನಡೆಯಲಿದೆ’ ಎಂದು ಮಾಹಿತಿ ನೀಡಿದರು.

‘ವಿಜೇತ ತಂಡಕ್ಕೆ ₹ 1 ಲಕ್ಷ ಬಹುಮಾನ ನೀಡಲಾಗುತ್ತದೆ. ರನ್ನರ್‌ ಅಪ್‌ ತಂಡಕ್ಕೆ ₹ 66,666 ಹಾಗೂ ತೃತೀಯ ಸ್ಥಾನ ಪಡೆದ ತಂಡಕ್ಕೆ ₹ 33,333 ನಗದು ಮತ್ತು ಆಕರ್ಷಕ ಟ್ರೋಫಿ ನೀಡಲಾಗುತ್ತದೆ. ಆಸಕ್ತ ಆಟಗಾರರು ಅರ್ಜಿ ಹಾಕಬಹುದು. ಆಯ್ಕೆ ಹಾಗೂ ತರಬೇತಿ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಟೂರ್ನಿ ನಡೆಯಲಿದೆ’ ಎಂದು ವಿವರಿಸಿದರು.

ಅಸೋಸಿಯೇಷನ್‌ ಗೌರವ ಅಧ್ಯಕ್ಷ ನಿಶಾನಿ ಜಯಣ್ಣ, ಕಾರ್ಯಾಧ್ಯಕ್ಷ ಜಿ.ಎಸ್‌. ಕುಮಾರಗೌಡ, ಕಾರ್ಯದರ್ಶಿ ಜೆ.ಶಶಿಧರ್‌ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು