ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರವಿಶಾಸ್ತ್ರಿಗೆ ಕೃತಜ್ಞತೆ ಸಲ್ಲಿಸಿದ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ

Last Updated 10 ನವೆಂಬರ್ 2021, 14:29 IST
ಅಕ್ಷರ ಗಾತ್ರ

ನವದೆಹಲಿ: ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಹುದ್ದೆಯಿಂದ ನಿರ್ಗಮಿಸುತ್ತಿರುವ ರವಿಶಾಸ್ತ್ರಿ ಮತ್ತು ನೆರವು ಸಿಬ್ಬಂದಿಗೆ ನಾಯಕ ವಿರಾಟ್ ಕೊಹ್ಲಿ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.

’ತಮ್ಮೆಲ್ಲರೊಂದಿಗಿನ ಈ ಪಯಣವು ಸುಂದರವಾಗಿತ್ತು. ನಿಮ್ಮ ಮಾರ್ಗದರ್ಶನದಲ್ಲಿ ತಂಡವಾಗಿ ಆಡಿದ್ದೇವೆ. ಈ ಬಳಗಕ್ಕೆ ನೀವು ನೀಡಿದ ಕಾಣಿಕೆ ಬಹು ಅಮೂಲ್ಯವಾದುದು. ಭಾರತದ ಕ್ರಿಕೆಟ್ ಇತಿಹಾಸದಲ್ಲಿ ತಮ್ಮ ಸಮರ್ಪಣೆಯು ಅವಿಸ್ಮರಣೀಯವಾಗಲಿದೆ‘ ಎಂದು ವಿರಾಟ್ ಟ್ವೀಟ್ ಮಾಡಿದ್ದಾರೆ.

’ಜೀವನದ ಮುಂದಿನ ಎಲ್ಲ ಹೆಜ್ಜೆಗಳಲ್ಲಿಯೂ ನಿಮಗೆ ಒಳ್ಳೆಯದಾಗಲಿ ಎಂದು ಹಾರೈಸುವೆ‘ ಎಂದಿದ್ದಾರೆ.

ಟಿ20 ವಿಶ್ವಕಪ್ ಟೂರ್ನಿಯ ನಂತರ ರವಿಶಾಸ್ತ್ರಿ, ಬೌಲಿಂಗ್ ಕೋಚ್ ಭರತ್ ಅರುಣ್ ಅವರ ಕಾರ್ಯಾವಧಿ ಮುಕ್ತಾಯಗೊಂಡಿದೆ. ವಿರಾಟ್ ಕೂಡ ಟಿ20 ತಂಡದ ನಾಯಕತ್ವ ಬಿಟ್ಟುಕೊಟ್ಟಿದ್ದಾರೆ. ನವೆಂಬರ್ 17ರಿಂದ ನ್ಯೂಜಿಲೆಂಡ್ ಎದುರು ನಡೆಯಲಿರುವ ಚುಟುಕು ಕ್ರಿಕೆಟ್ ಸರಣಿಯಲ್ಲಿ ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸುವರು. ರಾಹುಲ್ ದ್ರಾವಿಡ್ ಮುಖ್ಯ ಕೋಚ್ ಆಗಿ ಕಾರ್ಯಾರಂಭ ಮಾಡಲಿದ್ಧಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT