ಗುರುವಾರ, 1 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಸ್ಟ್ರೇಲಿಯಾ ಟೆಸ್ಟ್‌ ಕ್ರಿಕೆಟ್‌ನ ಮಾಜಿ ನಾಯಕ ಟಿಮ್‌ ಪೇನ್‌ ನಿವೃತ್ತಿ

Last Updated 17 ಮಾರ್ಚ್ 2023, 12:30 IST
ಅಕ್ಷರ ಗಾತ್ರ

ಸಿಡ್ನಿ (ಎಎಫ್‌ಪಿ): ಆಸ್ಟ್ರೇಲಿಯಾ ಟೆಸ್ಟ್‌ ತಂಡದ ಮಾಜಿ ನಾಯಕ ಟಿಮ್ ಪೇನ್‌ ಅವರು ಕ್ರಿಕೆಟ್‌ನ ಎಲ್ಲ ಮಾದರಿಗಳಿಗೆ ಶುಕ್ರವಾರ ನಿವೃತ್ತಿ ಪ್ರಕಟಿಸಿದರು.

38 ವರ್ಷದ ಪೇನ್‌ ಅವರು ಆಸ್ಟ್ರೇಲಿಯಾ ದೇಸಿ ಕ್ರಿಕೆಟ್‌ನಲ್ಲಿ ತಾಸ್ಮೇನಿಯಾ ತಂಡದ ಪರ ಶುಕ್ರವಾರ ಕೊನೆಯ ಪಂದ್ಯ ಆಡಿದರು.

2018 ರಿಂದ 2021 ರ ಅವಧಿಯಲ್ಲಿ ಅವರು 23 ಟೆಸ್ಟ್‌ ಪಂದ್ಯಗಳಲ್ಲಿ ಆಸ್ಟ್ರೇಲಿಯಾ ತಂಡವನ್ನು ಮುನ್ನಡೆಸಿದ್ದರು. ಇದರಲ್ಲಿ 11 ಪಂದ್ಯಗಳಲ್ಲಿ ತಂಡಕ್ಕೆ ಗೆಲುವು ಒಲಿದಿತ್ತು. ಎಂಟರಲ್ಲಿ ಸೋತಿದ್ದರೆ, ನಾಲ್ಕನ್ನು ಡ್ರಾ ಮಾಡಿಕೊಂಡಿತ್ತು.

35 ಟೆಸ್ಟ್‌ಗಳಲ್ಲಿ ಆಡಿರುವ ಅವರು 32.63ರ ಸರಾಸರಿಯಲ್ಲಿ 1,534 ರನ್‌ ಕಲೆಹಾಕಿದ್ದಾರೆ. 9 ಅರ್ಧಶತಕಗಳನ್ನು ಗಳಿಸಿರುವ ಅವರ ವೈಯಕ್ತಿಕ ಶ್ರೇಷ್ಠ ಸ್ಕೋರ್‌ 92 ಆಗಿದೆ. 35 ಏಕದಿನ ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದು, 890 ರನ್‌ ಪೇರಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT