ನವದೆಹಲಿ: ಜೈಲಿನಲ್ಲಿ ಅನಾರೋಗ್ಯದಿಂದ ಬಳಲುತ್ತಿರುವ ಮಾಜಿ ಕ್ರಿಕೆಟ್ ತಾರೆ– ರಾಜಕಾರಣಿ ಇಮ್ರಾನ್ ಖಾನ್ ಅವರಿಗೆ ಗುಣಮಟ್ಟದ ವೈದ್ಯಕೀಯ ಚಿಕಿತ್ಸೆ ಒದಗಿಸಬೇಕು ಎಂದು ದಿಗ್ಗಜ ಆಟಗಾರರಾದ ಸುನಿಲ್ ಗಾವಸ್ಕರ್ ಮತ್ತು ಕಪಿಲ್ ದೇವ್ ಸೇರಿದಂತೆ ವಿವಿಧ ತಂಡಗಳ 14 ಮಂದಿ ಮಾಜಿ ನಾಯಕರು ಪಾಕಿಸ್ತಾನ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಮಾಜಿ ಪ್ರಧಾನಿಯಾಗಿರುವ ಇಮ್ರಾನ್ ಖಾನ್ ಬಲಗಣ್ಣಿನ ದೃಷ್ಟಿ ಶೇ 85ರಷ್ಟು ಮಂದವಾಗಿದೆ. ರಾವಲ್ಪಿಂಡಿಯ ಜೈಲಿನಲ್ಲಿರುವ ಅವರಿಗೆ ಚಿಕಿತ್ಸೆ ನೀಡದೇ ನಿರ್ಲಕ್ಷಿಸಲಾಗಿದೆ ಎಂದು ಕುಟುಂಬ ಸದಸ್ಯರು ದೂರಿದ್ದಾರೆ. 1992ರಲ್ಲಿ ಏಕದಿನ ವಿಶ್ವಕಪ್ ಗೆದ್ದ ಪಾಕಿಸ್ತಾನ ತಂಡಕ್ಕೆ ಇಮ್ರಾನ್ ಖಾನ್ ನಾಯಕರಾಗಿದ್ದರು.

‘ಮಾಜಿ ಅಂತರರಾಷ್ಟ್ರೀಯ ಕ್ರಿಕೆಟ್ ನಾಯಕರ ಮನವಿ’ ಶೀರ್ಷಿಕೆಯ ಪತ್ರದಲ್ಲಿ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಅಂತರರಾಷ್ಟ್ರೀಯ ನಾಯಕರಿಗೆ ನೀಡುವಂಥ ಚಿಕಿತ್ಸೆ ನೀಡಬೇಕು ಎಂದು ಈ ಮಾಜಿ ನಾಯಕರು ಮನವಿ ಮಾಡಿದ್ದಾರೆ.

ಸೌರವ್ ಗಂಗೂಲಿ, ಮೈಕೆಲ್ ಅಥರ್ಟನ್, ಆ್ಯಲನ್ ಬಾರ್ಡರ್, ಮೈಕ್ ಬ್ರೇರ್ಲಿ, ಗ್ರೆಗ್ ಚಾಪೆಲ್, ಇಯಾನ್ ಚಾಪೆಲ್, ಬೆಲಿಂಡಾ ಕ್ಲಾರ್ಕ್, ಡೇವಿಡ್ ಗೋವರ್, ಕಿಮ್ ಹ್ಯೂಸ್, ನಾಸಿರ್ ಹುಸೇನ್, ಕ್ಲೈವ್ ಲಾಯ್ಡ್, ಸ್ಟೀವ್ ವಾ ಮತ್ತು ಜಾನ್ ರೈಟ್ ಅವರು ಪತ್ರಕ್ಕೆ ಸಹಿ ಹಾಕಿದ ಮಾಜಿ ನಾಯಕರಾಗಿದ್ದಾರೆ.

ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿ ಇಮ್ರಾನ್ ಖಾನ್ ಅವರಿಗೆ 2023ರಲ್ಲಿ 14 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. 73 ವರ್ಷ ವಯಸ್ಸಿನ ಇಮ್ರಾನ್ ಅವರಿಗೆ ವೈದ್ಯಕೀಯ ಚಿಕಿತ್ಸೆ, ಕಾನೂನು ನೆರವು ಒದಗಿಸಬೇಕು ಎಂದೂ ಪತ್ರದಲ್ಲಿ ಒತ್ತಾಯಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.