ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂಗ್ಲೆಂಡ್‌ನ ಮಾಜಿ ಕ್ರಿಕೆಟಿಗ ಜಾನ್ ಎಡ್ರಿಚ್ ನಿಧನ

Last Updated 25 ಡಿಸೆಂಬರ್ 2020, 13:50 IST
ಅಕ್ಷರ ಗಾತ್ರ

ಲಂಡನ್‌: ಪ್ರಥಮ ದರ್ಜೆ ಪಂದ್ಯಗಳಲ್ಲಿ ಶತಕಗಳ ಶತಕ ಗಳಿಸಿದ್ದ ಇಂಗ್ಲೆಂಡ್ ತಂಡದ ಮಾಜಿ ಬ್ಯಾಟ್ಸ್‌ಮನ್‌ ಜಾನ್ ಎಡ್ರಿಚ್‌ (83) ನಿಧನರಾಗಿದ್ದಾರೆ. ಇಂಗ್ಲೆಂಡ್‌ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿಯು (ಇಸಿಬಿ) ಶುಕ್ರವಾರ ಈ ವಿಷಯ ತಿಳಿಸಿದೆ.

ಇಂಗ್ಲೆಂಡ್ ರಾಷ್ಟ್ರೀಯ ತಂಡದ ಪರ 77 ಟೆಸ್ಟ್ ಪಂದ್ಯಗಳನ್ನು ಆಡಿದ್ದ ಎಡ್ರಿಚ್‌ 5,000ಕ್ಕೂ ಹೆಚ್ಚು ರನ್‌ ಕಲೆಹಾಕಿದ್ದರು. ಅದರಲ್ಲಿ 12 ಶತಕಗಳು ಸೇರಿವೆ. ಸರ್ರೆ ತಂಡದ ಮಾಜಿ ನಾಯಕ, ಪ್ರಥಮ ದರ್ಜೆ ಮಾದರಿಯಲ್ಲಿ 103 ಶತಕಗಳುಳ್ಳ 39,000ಕ್ಕೂ ಹೆಚ್ಚು ರನ್‌ ಗಳಿಸಿದ್ದರು.

1963ರಲ್ಲಿ ವೆಸ್ಟ್ ಇಂಡೀಸ್ ಎದುರಿನ ಪಂದ್ಯದ ಮೂಲಕ ಟೆಸ್ಟ್‌ಗೆ ಪದಾರ್ಪಣೆ ಮಾಡಿದ್ದರು. 1976ರಲ್ಲಿ ಅದೇ ತಂಡದ ವಿರುದ್ಧ ನಡೆದ ಪಂದ್ಯದಲ್ಲೇ ವಿದಾಯ ಹೇಳಿದ್ದರು.

1965ರಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆದ ಟೆಸ್ಟ್ ಪಂದ್ಯದಲ್ಲಿ ಎಡ್ರಿಚ್‌ ಔಟಾಗದೆ 310 ರನ್ ಗಳಿಸಿದ್ದರು. ಇದು ಇಂಗ್ಲೆಂಡ್ ಬ್ಯಾಟ್ಸ್‌ಮನ್‌ವೊಬ್ಬ ಟೆಸ್ಟ್ ಮಾದರಿಯಲ್ಲಿ ಗಳಿಸಿದ ಐದನೇ ಗರಿಷ್ಠ ಮೊತ್ತವಾಗಿದೆ.

1971ರಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ನ ಮೊಟ್ಟಮೊದಲ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿದಿದ್ದ ಅವರು, ಮೊದಲ ಬೌಂಡರಿ ಹಾಗೂ ಮೊದಲ ಅರ್ಧಶತಕ ಸಿಡಿಸಿದ ಹಿರಿಮೆ ಹೊಂದಿದ್ದರು. ಮೆಲ್ಬರ್ನ್‌ನಲ್ಲಿ ನಡೆದ ಆ ಹಣಾಹಣಿಯಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿಯೂ ಅವರಿಗೆ ಒಲಿದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT