ಬೆಂಗಳೂರು: ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ, ಸ್ಪಿನ್ ದಿಗ್ಗಜ ಕರ್ನಾಟಕದ ಬಿ.ಎಸ್.ಚಂದ್ರಶೇಖರ್ ಅವರಿಗೆ ಭಾನುವಾರ ಪಾರ್ಶ್ವವಾಯು ಸಮಸ್ಯೆ ಕಾಣಿಸಿಕೊಂಡಿದ್ದು, ನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ. 75 ವರ್ಷದ ಚಂದ್ರಶೇಖರ್ ಆರೋಗ್ಯದ ಮೇಲೆ ವೈದ್ಯರು ನಿಗಾ ವಹಿ ಸಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಭಾರತದ ಪರ 58 ಟೆಸ್ಟ್ ಪಂದ್ಯಗಳನ್ನು ಆಡಿರುವ ಚಂದ್ರಶೇಖರ್, 242 ವಿಕೆಟ್ ಗಳಿಸಿದ್ದಾರೆ. ಕ್ರಿಕೆಟ್ ಲೋಕದ ಶ್ರೇಷ್ಠ ಲೆಗ್‌ಸ್ಪಿನ್ನರ್‌ಗಳಲ್ಲಿ ಒಬ್ಬರಾಗಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.