ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪಘಾತ: ಶ್ರೀಲಂಕಾದ ಮಾಜಿ ಕ್ರಿಕೆಟಿಗನಿಗೆ ಗಾಯ

Published 14 ಮಾರ್ಚ್ 2024, 15:23 IST
Last Updated 14 ಮಾರ್ಚ್ 2024, 15:23 IST
ಅಕ್ಷರ ಗಾತ್ರ

ಕೊಲಂಬೊ: ಶ್ರೀಲಂಕಾದ ಮಾಜಿ ಕ್ರಿಕೆಟಿಗ ಲಾಹಿರು ತಿರಿಮನ್ನೆ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದು, ಅವರನ್ನು ಅನುರಾಧಪುರದ ತ್ರಿಪ್ಪಣೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಗುರುವಾರ ಬೆಳಿಗ್ಗೆ ತಿರಿಮನ್ನೆ ಪ್ರಯಾಣಿಸುತ್ತಿದ್ದ ಕಾರು, ವಿರುದ್ಧ ದಿಕ್ಕಿನಿಂದ ಬಂದ ಲಾರಿ ಮಧ್ಯೆ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೊಲಂಬೊದಿಂದ 205 ಕಿಮೀ ದೂರದಲ್ಲಿರುವ ಅನುರಾಧಪುರದಲ್ಲಿ ಅಪಘಾತ ನಡೆದಿದ್ದು, 34 ವರ್ಷದ ತಿರಿಮನ್ನೆ ಅವರು ಸಣ್ಣಪುಟ್ಟ ಗಾಯಗೊಂಡಿದ್ದಾರೆ. ಕಾರಿನಲ್ಲಿದ್ದ ಇತರ ಮೂವರು ಹಾಗೂ ಲಾರಿ ಚಾಲಕನೂ ಗಾಯಗೊಂಡಿದ್ದಾರೆ.

ಲಾಹಿರು ಅವರು ಶ್ರೀಲಂಕಾ ತಂಡದ ಪರ 44 ಟೆಸ್ಟ್‌, 127 ಏಕದಿನ ಮತ್ತು 26 ಟಿ20 ಪಂದ್ಯಗಳನ್ನು ಆಡಿದ್ದಾರೆ. 2022ರಲ್ಲಿ ಕೊನೆಯ ಬಾರಿ ರಾಷ್ಟ್ರೀಯ ತಂಡದಲ್ಲಿ ಕಾಣಿಸಿಕೊಂಡಿದ್ದ ಅವರು, 2023ರ ಜುಲೈನಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT