ಲಾಹೋರ್: ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಇಂಜಮಾಮ್ ಉಲ್ ಹಕ್ ಅವರಿಗೆ ಲಘು ಹೃದಯಾಘಾತಕ್ಕೊಳಗಾದರು. 51 ವರ್ಷದ ಇಂಜಮಾಮ್ ಅವರಿಗೆ ಆ್ಯಂಜಿಯೊಪ್ಲಾಸ್ಟಿ ಮಾಡಲಾಗಿದ್ದು, ಆರೋಗ್ಯ ಸ್ಥಿರವಾಗಿದೆ.
‘ಉಸಿರಾಟದಲ್ಲಿ ತೊಂದರೆಯಾಗುತ್ತಿದೆ ಮತ್ತು ಎದೆನೋವು ಇದೆ ಎಂದು ಸೋಮವಾರ ಇಂಜಮಾಮ್ ಹೇಳಿದರು. ಕೂಡಲೇ ಖಾಸಗಿ ಆಸ್ಪತ್ರೆಗೆ ಸೇರಿಸಲಾಯಿತು’ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ. 120 ಟೆಸ್ಟ್, 370 ಏಕದಿನ ಪಂದ್ಯಗಳನ್ನು ಆಡಿದ್ದಾರೆ.