ಗುರುವಾರ, 8 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರಿಕೆಟ್‌ | ಪಾಕಿಸ್ತಾನದ ಹಿರಿಯ ಆಟಗಾರ್ತಿ ಸನಾ ಮಿರ್ ನಿವೃತ್ತಿ

Last Updated 25 ಏಪ್ರಿಲ್ 2020, 19:45 IST
ಅಕ್ಷರ ಗಾತ್ರ

ಕರಾಚಿ: ಪಾಕಿಸ್ತಾನದ ಹಿರಿಯ ಆಟಗಾರ್ತಿ ಸನಾ ಮಿರ್‌ ಅವರು ಶನಿವಾರ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ.

2005ರಲ್ಲಿ ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ಸನಾ, ಈ ಮಾದರಿಯಲ್ಲಿ ಒಟ್ಟು 120 ಪಂದ್ಯಗಳನ್ನು ಆಡಿದ್ದಾರೆ. ಟ್ವೆಂಟಿ–20 ಮಾದರಿಯಲ್ಲಿ ಒಟ್ಟು 106 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದರು.

2009ರಿಂದ 2017ರ ಅವಧಿಯಲ್ಲಿ ಅವರು ಏಕದಿನ ಮತ್ತು ಟ್ವೆಂಟಿ–20 ಸೇರಿದಂತೆ ಒಟ್ಟು 137 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಪಾಕಿಸ್ತಾನ ತಂಡವನ್ನು ಮುನ್ನಡೆಸಿದ್ದಾರೆ.

‘ನಿವೃತ್ತಿ ಪ್ರಕಟಿಸಲು ಇದು ಸಕಾಲ. 15 ವರ್ಷಗಳ ಕಾಲ ಪಾಕಿಸ್ತಾನದ ಪರ ಆಡಿದ್ದೇನೆ. ತಂಡದ ಯಶಸ್ಸಿಗಾಗಿ ಶಕ್ತಿಮೀರಿ ಪ್ರಯತ್ನಿಸಿದ್ದೇನೆ. ಮಹಿಳಾ ಕ್ರಿಕೆಟ್‌ ಬೆಳವಣಿಗೆಗೆ ನನ್ನಿಂದಾದ ಕೊಡುಗೆ ನೀಡಿದ್ದೇನೆ ಎಂಬ ನಂಬಿಕೆಯೂ ಇದೆ’ ಎಂದು 34 ವರ್ಷ ವಯಸ್ಸಿನ ಸನಾ, ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ಇಷ್ಟು ವರ್ಷಗಳ ಕಾಲ ಅಗತ್ಯ ಸಲಹೆ ಹಾಗೂ ಮಾರ್ಗದರ್ಶನ ನೀಡಿ ಪ್ರೋತ್ಸಾಹಿಸಿದ ಪಾಕ್‌ ತಂಡದ ಆಟಗಾರ್ತಿಯರು, ನೆರವು ಸಿಬ್ಬಂದಿ, ಮೈದಾನ ಸಿಬ್ಬಂದಿ ಸೇರಿದಂತೆ ಎಲ್ಲರಿಗೂ ಆಭಾರಿಯಾಗಿದ್ದೇನೆ’ ಎಂದಿದ್ದಾರೆ.

‘ನನ್ನ ಕನಸು ಸಾಕಾರಗೊಳ್ಳಲು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದ ಕುಟುಂಬದ ಸದಸ್ಯರು, ಮಾರ್ಗದರ್ಶಕರಿಗೂ ಕೃತಜ್ಞಳಾಗಿದ್ದೇನೆ’ ಎಂದೂ ತಿಳಿಸಿದ್ದಾರೆ.

ಆಫ್‌ ಸ್ಪಿನ್ನರ್‌ ಸನಾ, ಪಾಕಿಸ್ತಾನದ ಪರ ಅತೀ ಹೆಚ್ಚು ವಿಕೆಟ್‌ ಪಡೆದ ಆಟಗಾರ್ತಿ ಎಂಬ ಹಿರಿಮೆ ಹೊಂದಿದ್ದಾರೆ.

‘ಕ್ರಿಕೆಟ್‌ ಪಯಣದ ವೇಳೆ ಹಲವು ಆಟಗಾರ್ತಿಯರ ಸ್ನೇಹ ಸಂಪಾದಿಸಿದ್ದೇನೆ. ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಇಷ್ಟು ವರ್ಷ ಪಾಕಿಸ್ತಾನವನ್ನು ಪ್ರತಿನಿಧಿಸಿದ್ದರಿಂದ ಹೆಮ್ಮೆಯ ಭಾವ ಮೂಡಿದೆ. ವರ್ಷದಿಂದ ವರ್ಷಕ್ಕೆ ಮಹಿಳಾ ಕ್ರಿಕೆಟ್‌ನ ಜನಪ್ರಿಯತೆ ಏರುತ್ತಲೇ ಇದೆ. ಮಹಿಳಾ ಕ್ರಿಕೆಟ್‌ನ ಬೆಳವಣಿಗೆಗಾಗಿ ಶ್ರಮಿಸುತ್ತಿರುವ ಅಂತರರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌ಗೆ (ಐಸಿಸಿ) ಧನ್ಯವಾದಗಳನ್ನು ಅರ್ಪಿಸುತ್ತೇನೆ’ ಎಂದು ಅವರು ನುಡಿದಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT