ಸೋಮವಾರ, ಜೂನ್ 27, 2022
28 °C

ಲಂಕಾ ಮಹಿಳಾ ಕ್ರಿಕೆಟ್ ತಂಡಕ್ಕೆ ತಿಲಕರತ್ನೆ ಕೋಚ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೊಲಂಬೊ: ಮಾಜಿ ಕ್ರಿಕೆಟಿಗ ಹಷನ್ ತಿಲಕರತ್ನೆ ಅವರನ್ನು ಶ್ರೀಲಂಕಾ ಮಹಿಳಾ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ನೇಮಕ ಮಾಡಲಾಗಿದೆ.

1996ರ ವಿಶ್ವಕಪ್ ವಿಜೇತ ಶ್ರೀಲಂಕಾ ತಂಡದಲ್ಲಿ ತಿಲಕರತ್ನೆ ಆಡಿದ್ದರು. ಮಧ್ಯಮಕ್ರಮಾಂಕದ ಎಡಗೈ ಬ್ಯಾಟ್ಸ್‌ಮನ್ ಆಗಿದ್ದರು. ಅವರು ನಿವೃತ್ತಿಯ ನಂತರ ಬೇರೆ ಬೇರೆ ತಂಡಗಳಿಗೆ ಕೋಚ್ ಆಗಿ ಕಾರ್ಯನಿರ್ವಹಿಸಿದ್ದಾರೆ.

‘ಜೂನ್ 1ರಿಂದ ಜಾರಿಗೆ ಬರುವಂತೆ ತಿಲಕರತ್ನೆ ಅವರನ್ನು ಮಹಿಳಾ ತಂಡದ ಮುಖ್ಯ ಕೋಚ್ ಹುದ್ದೆಗೆ ನೇಮಕ ಮಾಡಲಾಗಿದೆ‘ ಎಂದು ಶ್ರೀಲಂಕಾ ಕ್ರಿಕೆಟ್ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.  ಅವರ ಗುತ್ತಿಗೆಯು ಆರು ತಿಂಗಳ ಅವಧಿಯದ್ದಾಗಿದ್ದು.  ಡಿಸೆಂಬರ್ 31ಕ್ಕೆ ಮುಕ್ತಾಯವಾಗಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು