ಭಾನುವಾರ, 28 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮನಗರ: ಐಪಿಎಲ್‌ ಬೆಟ್ಟಿಂಗ್‌– ನಾಲ್ವರ ಬಂಧನ, ₹ 10 ಲಕ್ಷ ನಗದು ವಶ

Last Updated 12 ಅಕ್ಟೋಬರ್ 2021, 14:04 IST
ಅಕ್ಷರ ಗಾತ್ರ

ರಾಮನಗರ: ಚನ್ನಪಟ್ಟಣ ತಾಲ್ಲೂಕಿನ ಹೊಡಿಕೆ ಹೊಸಹಳ್ಳಿ ಸೇರಿದಂತೆ ಜಿಲ್ಲೆಯ ವಿವಿಧೆಡೆ ಐಪಿಎಲ್ ಕ್ರಿಕೆಟ್‌ ಬೆಟ್ಟಿಂಗ್‌ ದಂಧೆಯಲ್ಲಿ ತೊಡಗಿದ್ದ ನಾಲ್ವರು ಬುಕ್ಕಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ ತಲೆಮರಿಸಿಕೊಂಡಿದ್ದಾರೆ.

ಹೊಡಿಕೆ ಹೊಸಹಳ್ಳಿ ಗ್ರಾಮದ ಎಚ್‌.ಎಂ. ಆತ್ಮಾನಂದ್ (40), ಮಳೂರುಪಟ್ಟಣ ನಿವಾಸಿ ಎಂ. ಸಿ. ಮನು (39), ರಾಮನಗರದ ವಿವೇಕಾನಂದ ನಗರ ನಿವಾಸಿ ಎಸ್‌. ಕೃಷ್ಣಮೂರ್ತಿ ಹಾಗೂ ಚನ್ನಪಟ್ಟಣದ ಎಂ.ಜಿ. ರಸ್ತೆ ಸಮೀಪದ ನಿವಾಸಿ ನಾಗಾರ್ಜುನ (31) ಬಂಧಿತರು. ಮತ್ತೊಬ್ಬ ಆರೋಪಿ ಸಂದೀಪ್‌ ತಲೆಮರೆಸಿಕೊಂಡಿದ್ದಾರೆ.

ಐಪಿಎಲ್ ಬೆಟ್ಟಿಂಗ್: ಬಂಧಿತ ಆರೋಪಿಗಳು
ಐಪಿಎಲ್ ಬೆಟ್ಟಿಂಗ್: ಬಂಧಿತ ಆರೋಪಿಗಳು

ಬಂಧಿತರಿಂದ ₹10.98 ಲಕ್ಷ ನಗದು, ಹುಂಡೈ ಕಾರು, 2 ಟಿ.ವಿ. ಸೆಟ್‌ ಅಪ್ ಬಾಕ್ಸ್‌ಗಳು, 8 ಮೊಬೈಲ್‌ ಹಾಗೂ ಎಟಿಎಂ ಕಾರ್ಡ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಸೋಮವಾರ ನಡೆದ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ್ತ ನೈಟ್ ರೈಡರ್ಸ್ ನಡುವಿನ ಪಂದ್ಯದ ವೇಳೆ ಈ ಆರೋಪಿಗಳು ಜನರಿಂದ ಹಣ ಸಂಗ್ರಹಿಸಿ ಬೆಟ್ಟಿಂಗ್‌ ಜೂಜಾಟ ನಡೆಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ರಾಮನಗರ ಸೈಬರ್‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT