ನವದೆಹಲಿ: ಕುಟುಂಬದ ಸದಸ್ಯರೊಬ್ಬರಿಗೆ ಕೋವಿಡ್–19 ದೃಢಪಟ್ಟ ಹಿನ್ನೆಲೆಯಲ್ಲಿ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಪ್ರತ್ಯೇಕವಾಸದ ಮೊರೆ ಹೋಗಿದ್ದಾರೆ. ತಾವೂ ಸೋಂಕು ಪರೀಕ್ಷೆಗೆ ಒಳಗಾಗಿದ್ದು, ವರದಿಗಾಗಿ ಕಾಯುತ್ತಿದ್ದಾರೆ.

ವಿಶ್ವಕಪ್ ವಿಜೇತಭಾರತ ತಂಡದ ಸದಸ್ಯರಾಗಿರುವ ಗಂಭೀರ್, ಸದ್ಯ ಪೂರ್ವ ದೆಹಲಿ ಲೋಕಸಭಾ ಸದಸ್ಯರೂ ಹೌದು.

‘ಮನೆಯ ಸದಸ್ಯರೊಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಹೀಗಾಗಿ ನಾನು ಪ್ರತ್ಯೇಕವಾಸದಲ್ಲಿದ್ದೇನೆ. ನಾನೂ ಪರೀಕ್ಷೆ ಮಾಡಿಸಿಕೊಂಡಿದ್ದು, ವರದಿಗಾಗಿ ಕಾಯುತ್ತಿದ್ದೇನೆ. ಕೋವಿಡ್‌ಅನ್ನು ಹಗುರವಾಗಿ ಪರಿಗಣಿಸಬೇಡಿ. ಪ್ರತಿಯೊಬ್ಬರು ಮಾರ್ಗಸೂಚಿಗಳನ್ನು ಪಾಲಿಸಿ. ಸುರಕ್ಷಿತವಾಗಿರಿ‘ ಎಂದು ಗಂಭೀರ್ ಟ್ವೀಟ್ ಮಾಡಿದ್ದಾರೆ.

39 ವರ್ಷದ ಗಂಭೀರ್, ಭಾರತ ತಂಡದ ಪರ 58 ಟೆಸ್ಟ್, 147 ಏಕದಿನ ಹಾಗೂ 37 ಟಿ–20 ಪಂದ್ಯಗಳಲ್ಲಿ ಆಡಿದ್ದಾರೆ.

ದೆಹಲಿ ನಗರದಲ್ಲಿ ಗುರುವಾರ 6,700ಕ್ಕಿಂತ ಹೆಚ್ಚು ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಒಟ್ಟಾರೆ 4.16 ಲಕ್ಷ ಮಂದಿ ಕೊರೊನಾ ಸೋಂಕಿಗೆ ಒಳಪಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.