ಸೋಮವಾರ, 22 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಅಮಿತ್‌ ಶಾ ಭೇಟಿಯಾದ ಮಾಜಿ ಕ್ರಿಕೆಟಿಗ ಗೌತಮ್‌ ಗಂಭೀರ್‌

Published 17 ಜೂನ್ 2024, 15:33 IST
Last Updated 17 ಜೂನ್ 2024, 15:33 IST
ಅಕ್ಷರ ಗಾತ್ರ

ನವದೆಹಲಿ: ಭಾರತ ಕ್ರಿಕೆಟ್‌ ತಂಡದ ಮಾಜಿ ಆಟಗಾರ, ಕೋಲ್ಕತ್ತ ನೈಟ್‌ ರೈಡರ್ಸ್‌ ತಂಡದ ಮೆಂಟರ್‌ ಆಗಿರುವ ಗೌತಮ್‌ ಗಂಭೀರ್‌ ಅವರು ಸೋಮವಾರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾದರು.

ಹಿಂದಿನ ಅವಧಿಯಲ್ಲಿ ಪೂರ್ವ ದೆಹಲಿ ಕ್ಷೇತ್ರದ ಬಿಜೆಪಿ ಸಂಸದರಾಗಿದ್ದ ಗಂಭೀರ್‌ ಅವರು ಈ ಬಾರಿ ಸ್ಪರ್ಧೆಯಿಂದ ಹಿಂದೆ ಸರಿದಿದ್ದರು. ಭಾರತ ತಂಡದ ಮುಖ್ಯ ಕೋಚ್‌ ಹುದ್ದೆಗೆ ಪ್ರಬಲ ಆಕಾಂಕ್ಷಿಯಾಗಿರುವ ಅವರು ಸಕ್ರಿಯ ರಾಜಕಾರಣದಿಂದ ವಿರಾಮ ಪಡೆದಿದ್ದಾರೆ.

‘ಲೋಕಸಭಾ ಚುನಾವಣಾ ಯಶಸ್ಸಿಗೆ ಅಭಿನಂದನೆ ಸಲ್ಲಿಸಲು ಶಾ ಅವರನ್ನು ಭೇಟಿ ಮಾಡಿದೆ. ಗೃಹ ಸಚಿವರಾಗಿ ಅವರ ನಾಯಕತ್ವವು ನಮ್ಮ ರಾಷ್ಟ್ರದ ಭದ್ರತೆ ಮತ್ತು ಸ್ಥಿರತೆಯನ್ನು ಮತ್ತಷ್ಟು ಬಲಪಡಿಸುತ್ತದೆ’ ಎಂದು ಅವರು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ರಾಹುಲ್‌ ದ್ರಾವಿಡ್‌ ಅವರ ಸ್ಥಾನಕ್ಕೆ ಗಂಭೀರ್‌ ಅವರ ಹೆಸರು ಬಲವಾಗಿ ಕೇಳಿಬರುತ್ತಿದೆ. ಟಿ20 ವಿಶ್ವಕಪ್‌ ಟೂರ್ನಿಯ ಬಳಿಕ ಮುಖ್ಯ ಕೋಚ್‌ ಸ್ಥಾನದಿಂದ ಕೆಳಗಿಳಿಯುವುದಾಗಿ ದ್ರಾವಿಡ್‌ ಈಗಾಗಲೇ ಘೋಷಿಸಿದ್ದಾರೆ. ಹೊಸ ನೇಮಕಾತಿ ಕುರಿತಂತೆ ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ಯಾವುದೇ ಅಧಿಕೃತ ಪ್ರತಿಕ್ರಿಯೆ ನೀಡಿಲ್ಲ. ಅಶೋಕ್ ಮಲ್ಹೋತ್ರ ನೇತೃತ್ವದ ಕ್ರಿಕೆಟ್ ಸಲಹಾ ಸಮಿತಿಯು (ಸಿಎಸಿ) ಆಕಾಂಕ್ಷಿ ಅಭ್ಯರ್ಥಿಗಳ ಸಂದರ್ಶನ ನಡೆಸಲಿದೆ.

ಇತ್ತೀಚೆಗಷ್ಟೇ ದುಬೈನಲ್ಲಿ ನಡೆದ ಪ್ರಚಾರ ಕಾರ್ಯಕ್ರಮವೊಂದರಲ್ಲಿ ಗಂಭೀರ್ ಅವರು ರಾಷ್ಟ್ರೀಯ ತಂಡಕ್ಕೆ ಕೋಚ್ ಆಗುವ ಬಯಕೆಯನ್ನು ವ್ಯಕ್ತಪಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT