ಭಾನುವಾರ, ಜನವರಿ 17, 2021
28 °C

ಆಸ್ಪತ್ರೆಯಲ್ಲಿ ಮತ್ತೊಂದು ದಿನ ಉಳಿದ ಗಂಗೂಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲ್ಕತ್ತ: ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧ್ಯಕ್ಷ ಸೌರವ್ ಗಂಗೂಲಿ ಅವರು ಮತ್ತೊಂದು ದಿನ ಆಸ್ಪತ್ರೆಯಲ್ಲಿಯೇ ಇರಲು ನಿರ್ಧರಿಸಿದ್ದರಿಂದ ಬುಧವಾರ ಮನೆಗೆ ಮರಳಲಿಲ್ಲ.

‘ಅವರು ಚೇತರಿಸಿಕೊಳ್ಳುತ್ತಿದ್ದು ಬುಧವಾರ ಮನೆಗೆ ಮರಳಬಹುದೆಂದು ಸಲಹೆ ನೀಡಿದ್ದೆವು. ಆದರೆ, ಸ್ವತಃ ಗಂಗೂಲಿಯವರೇ ಗುರುವಾರ ಮರಳುವುದಾಗಿ ತಿಳಿಸಿದ್ದಾರೆ. ನಮ್ಮ ವೈದ್ಯಕೀಯ ತಂಡವು ಅವರ ಆರೋಗ್ಯದ ಬಗ್ಗೆ ಸತತ ನಿಗಾ ವಹಿಸಿದೆ’ ಎಂದು ವುಡ್‌ಲ್ಯಾಂಡ್ ಆಸ್ಪತ್ರೆಯ ವೈದ್ಯರು  ತಿಳಿಸಿದ್ದಾರೆ.

ಹೋದ ಶನಿವಾರದಂದು ಲಘು ಹೃದಯಸ್ತಂಭನದಿಂದಾಗಿ ಗಂಗೂಲಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಆ್ಯಂಜಿಯೊಪ್ಲಾಸ್ಟಿ ಮಾಡಲಾಗಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು