ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ಸೋಂಕು: ಸೌರವ್ ಗಂಗೂಲಿ ಆರೋಗ್ಯ ಸ್ಥಿರ

Last Updated 29 ಡಿಸೆಂಬರ್ 2021, 13:33 IST
ಅಕ್ಷರ ಗಾತ್ರ

ಕೋಲ್ಕತ್ತ: ಕೋವಿಡ್ ಚಿಕಿತ್ಸೆಗಾಗಿ ಇಲ್ಲಿಯ ವುಡ್‌ಲ್ಯಾಂಡ್ಸ್‌ ಆಸ್ಪತ್ರೆಗೆ ದಾಖಲಾಗಿರುವ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ ಅಧ್ಯಕ್ಷ ಸೌರವ್ ಗಂಗೂಲಿ ಅವರ ಆರೋಗ್ಯ ಸ್ಥಿರವಾಗಿದೆ.

‘ಅವರು ಆಸ್ಪತ್ರೆಗೆ ದಾಖಲಾಗಿ ಎರಡು ದಿನವಾಗಿದೆ. ಅವರ ಆರೋಗ್ಯ ಸ್ಥಿರವಾಗಿದೆ. ಅವರ ಆಮ್ಲಜನಕ ಮಟ್ಟವು ಶೇ 99ರಷ್ಟು ಇದೆ. ರಾತ್ರಿ ಚೆನ್ನಾಗಿ ನಿದ್ದೆ ಮಾಡಿದ್ದಾರೆ. ಬುಧವಾರ ಬೆಳಿಗ್ಗೆ ತಿಂಡಿ ಮತ್ತು ಮಧ್ಯಾಹ್ನ ಊಟವನ್ನೂ ಮಾಡಿದ್ದರೆ’ ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕಿ ರೂಪಾಲಿ ಬಸು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೋಮವಾರ ಆರ್‌ಟಿಪಿಸಿಆರ್ ವರದಿಯಲ್ಲಿ ಗಂಗೂಲಿ ಅವರಿಗೆ ಕೋವಿಡ್ ಇರುವುದು ಖಚಿತವಾಗಿತ್ತು. ಅವರನ್ನೂ ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರಿಣತ ವೈದ್ಯರ ತಂಡವು ಅವರಿಗೆ ಚಿಕಿತ್ಸೆ ನೀಡುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT