ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್‌ಸಿಬಿಗೆ ಕರ್ಸ್ಟನ್‌ ಕೋಚ್‌

Last Updated 30 ಆಗಸ್ಟ್ 2018, 15:35 IST
ಅಕ್ಷರ ಗಾತ್ರ

ಬೆಂಗಳೂರು: ದಕ್ಷಿಣ ಆಫ್ರಿಕಾದ ಹಿರಿಯ ಆಟಗಾರ ಗ್ಯಾರಿ ಕರ್ಸ್ಟನ್‌ ಅವರನ್ನು ಇಂಡಿಯನ್‌ ಪ್ರೀಮಿಯರ್‌ ಲೀಗ್‌ನಲ್ಲಿ (ಐಪಿಎಲ್‌) ಆಡುವ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ತಂಡದ ಮುಖ್ಯ ಕೋಚ್‌ ಆಗಿ ನೇಮಿಸಲಾಗಿದೆ.

ಹಿಂದಿನ ಎಂಟು ವರ್ಷಗಳಿಂದ ಮುಖ್ಯ ಕೋಚ್‌ ಮತ್ತು ಸಲಹೆಗಾರರಾಗಿ ಕೆಲಸ ಮಾಡಿದ್ದ ನ್ಯೂಜಿಲೆಂಡ್‌ನ ಡೇನಿಯಲ್‌ ವೆಟೋರಿ ಅವರನ್ನು ವಜಾಗೊಳಿಸಲಾಗಿದೆ.

‘ವೆಟೋರಿ ಅವರ ಮಾರ್ಗದರ್ಶನದಲ್ಲಿ ತಂಡ ಉತ್ತಮ ಸಾಮರ್ಥ್ಯ ತೋರಿದೆ. ತಂಡದ ಆಡಳಿತದಲ್ಲಿ ಕೆಲ ಬದಲಾವಣೆ ಮಾಡಲು ನಾವು ತೀರ್ಮಾನಿಸಿದ್ದೇವೆ. ಇದರ ಮೊದಲ ಹೆಜ್ಜೆಯಾಗಿ ಕರ್ಸ್ಟನ್‌ ಅವರನ್ನು ಮುಖ್ಯ ಕೋಚ್‌ ಮತ್ತು ಸಲಹೆಗಾರರನ್ನಾಗಿ ನೇಮಕ ಮಾಡಿದ್ದೇವೆ’ ಎಂದು ಆರ್‌ಸಿಬಿ ಮುಖ್ಯಸ್ಥ ಸಂಜೀವ್‌ ಚುರಿವಾಲಾ ತಿಳಿಸಿದ್ದಾರೆ.

ಗ್ಯಾರಿ ಕರ್ಸ್ಟನ್‌ ಅವರು ಹಿಂದಿನ ಆವೃತ್ತಿಯಲ್ಲಿ ಆರ್‌ಸಿಬಿ ತಂಡದ ಬ್ಯಾಟಿಂಗ್‌ ಕೋಚ್‌ ಆಗಿ ಕೆಲಸ ಮಾಡಿದ್ದರು.

2008ರಲ್ಲಿ ಭಾರತ ಕ್ರಿಕೆಟ್‌ ತಂಡದ ಕೋಚ್‌ ಆಗಿ ನೇಮಕವಾಗಿದ್ದರು. ಅವರ ಮಾರ್ಗದರ್ಶನದಲ್ಲಿ ತರಬೇತುಗೊಂಡಿದ್ದ ಮಹೇಂದ್ರ ಸಿಂಗ್‌ ದೋನಿ ಪಡೆ 2011ರ ಏಕದಿನ ವಿಶ್ವಕಪ್‌ನಲ್ಲಿ ‍ಪ್ರಶಸ್ತಿ ಗೆದ್ದಿತ್ತು.

‘ಆರ್‌ಸಿಬಿ ತಂಡದ ಮುಖ್ಯ ಕೋಚ್‌ ಆಗಿ ಕೆಲಸ ಮಾಡಿರುವ ಅವಕಾಶ ಸಿಕ್ಕಿರುವುದಕ್ಕೆ ಅತೀವ ಖುಷಿಯಾಗಿದೆ. ಈ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸುತ್ತೇನೆ’ ಎಂದು ಗ್ಯಾರಿ ತಿಳಿಸಿದ್ದಾರೆ.

‘ಕೋಚ್‌ ಮತ್ತು ಆಟಗಾರನಾಗಿ ಆರ್‌ಸಿಬಿ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದೆ. ಎಂಟು ವರ್ಷಗಳ ಪಯಣ ಈಗ ಅಂತ್ಯಗೊಂಡಿದೆ. ಮುಂದಿನ ಋತುಗಳಲ್ಲಿ ಆರ್‌ಸಿಬಿ ಉತ್ತಮ ಸಾಧನೆ ಮಾಡಲಿ’ ಎಂದು ವೆಟೋರಿ ಹಾರೈಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT