ಮಂಗಳವಾರ, ಅಕ್ಟೋಬರ್ 20, 2020
25 °C

ಕ್ರಿಸ್‌ ಗೇಲ್‌ಗೆ ಅನಾರೋಗ್ಯ: ಕುಂಬ್ಳೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ದುಬೈ: ಸನ್‌ರೈಸರ್ಸ್‌ ಹೈದರಾಬಾದ್ ಎದುರಿನ ಪಂದ್ಯದಲ್ಲಿ ಕ್ರಿಸ್‌ ಗೇಲ್ ಆಡಲು ಆಯ್ಕೆಯಾಗಿದ್ದರು. ಆದರೆ, ಅನಾರೋಗ್ಯದಿಂದಾಗಿ ಅವರು ಕಣಕ್ಕಿಳಿಯಲಿಲ್ಲ ಎಂದು ಕಿಂಗ್ಸ್‌ ಇಲೆವನ್ ಪಂಜಾಬ್ ತಂಡದ ಮುಖ್ಯ ಕೋಚ್ ಅನಿಲ್ ಕುಂಬ್ಳೆ ತಿಳಿಸಿದರು.

ಗುರುವಾರ ಇಲ್ಲಿ ನಡೆದ ಪಂದ್ಯದ ಸಂದರ್ಭದಲ್ಲಿ ಅಧಿಕೃತ ಪ್ರಸಾರಕ ಸ್ಟಾರ್‌ ಸ್ಪೋರ್ಟ್ಸ್‌ ವಾಹಿನಿಯೊಂದಿಗೆ ಅವರು ಮಾತನಾಡಿದರು.

‘ಆಹಾರ ಸೇವನೆಯಲ್ಲಿ ಆದ ವ್ಯತ್ಯಾಸದಿಂದ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಆದ್ದರಿಂದ ಅವರು ಪಂದ್ಯದಿಂದ ಹಿಂದೆ ಸರಿದರು’ ಎಂದು ಕುಂಬ್ಳೆ ಸ್ಪಷ್ಟಪಡಿಸಿದರು. 

ಐಪಿಎಲ್‌ನಲ್ಲಿ ಹಲವು ದಾಖಲೆಗಳನ್ನು ನಿರ್ಮಿಸಿರುವ ವೆಸ್ಟ್ ಇಂಡೀಸ್‌ನ ಸ್ಫೋಟಕ ಬ್ಯಾಟ್ಸ್‌ಮನ್ ಈ ಬಾರಿಯ ಟೂರ್ನಿಯಲ್ಲಿ ಇನ್ನೂ ಒಂದೂ ಪಂದ್ಯದಲ್ಲಿ ಆಡಿಲ್ಲ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು