ಗುರುವಾರ, 1 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

WPL–2023|GG vs RCB: 4.6.4.4.4– 18 ಎಸೆತಗಳಲ್ಲಿ ಸೋಫಿಯಾ ಅರ್ಧಶತಕ

Last Updated 8 ಮಾರ್ಚ್ 2023, 17:42 IST
ಅಕ್ಷರ ಗಾತ್ರ

ಮುಂಬೈ: ಮಹಿಳೆಯರ ಪ್ರೀಮಿಯರ್ ಲೀಗ್(ಎಂಪಿಎಲ್) ಕ್ರಿಕೆಟ್ ಟೂರ್ನಿಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ತಂಡದ ಆಟಗಾರ್ತಿ ಸೋಫಿಯಾ ಡಂಕ್ಲೀ ಈ ಪಂದ್ಯಾವಳಿಯ ಅತ್ಯಂತ ವೇಗದ ಅರ್ಧಶತಕ ಸಿಡಿಸಿದ್ದಾರೆ.

ಕೇವಲ 18 ಎಸೆತಗಳಲ್ಲಿ ಅವರು ಈ ಸಾಧನೆ ಮಾಡಿದ್ದಾರೆ.

ಕೇವಲ 8 ರನ್‌ಗಳಿಗೆ ಆರಂಭಿಕ ಆಟಗಾರ್ತಿ ಸಬ್ಬಿನೇನಿ ಮೇಘನಾ ಔಟ್ ಆದ ಬಳಿಕ ರನ್ ಗತಿ ಹೆಚ್ಚಿಸಿದ ಸೋಫಿಯಾ, ನಿರ್ಭೀತಿಯಿಂದ ಬ್ಯಾಟ್ ಬೀಸಿದರು.

ರೇಣುಕಾ ಠಾಕೂರ್ ಎಸೆದ ನಾಲ್ಕನೇ ಓವರ್‌ನಲ್ಲಿ ಎರಡು ಬೌಂಡರಿ ಮತ್ತು ಒಂದು ಸಿಕ್ಸರ್ ಸಿಡಿಸಿದ ಸೋಫಿಯಾ, ಪ್ರೀತಿ ಬೋಸ್ ಎಸೆದ ಐದನೇ ಓವರ್‌ನಲ್ಲಿ 4 ಬೌಂಡರಿ ಮತ್ತು ಒಂದು ಸಿಕ್ಸರ್(4.6.4.4.4) ಸಹಿತ 22 ರನ್ ಸಿಡಿಸಿ ಅರ್ಧಶತಕ ಪೂರೈಸಿದರು.

ವಿಶ್ವದ ಮಹಿಳೆಯರ ಟಿ–20 ಕ್ರಿಕೆಟ್‌ನಲ್ಲಿ ಇದು ನಾಲ್ಕನೇ ವೇಗದ ಅರ್ಧಶತಕವಾಗಿದೆ.

ಒಟ್ಟಾರೆ ಸೋಫಿಯಾ 28 ಎಸೆತಗಳಲ್ಲಿ 65 ರನ್ ಸಿಡಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT