ಕೊಹ್ಲಿಗೆ ವಿಶ್ರಾಂತಿ ನೀಡಲು ವಾನ್‌ ಸಲಹೆ

ಮಂಗಳವಾರ, ಏಪ್ರಿಲ್ 23, 2019
32 °C

ಕೊಹ್ಲಿಗೆ ವಿಶ್ರಾಂತಿ ನೀಡಲು ವಾನ್‌ ಸಲಹೆ

Published:
Updated:
Prajavani

ನವದೆಹಲಿ: ಮಂಬರುವ ವಿಶ್ವಕಪ್‌ ಹಿನ್ನೆಲೆಯಲ್ಲಿ ರಾಯಲ್‌ ಚಾಲೆಂಜರ್ಸ್‌ ತಂಡದ ನಾಯಕ ವಿರಾಟ್‌ ಕೊಹ್ಲಿ ಅವರಿಗೆ ವಿಶ್ರಾಂತಿ ನೀಡುವುದು ಅಗತ್ಯ ಎಂದು ಇಂಗ್ಲೆಂಡ್ ತಂಡದ ಮಾಜಿ ನಾಯಕ ಮೈಕೆಲ್‌ ವಾನ್‌ ಅವರು ಸಲಹೆ ನೀಡಿದ್ದಾರೆ.

ಈ ಸಲದ ಐಪಿಎಲ್‌ನಲ್ಲಿ ಕೊಹ್ಲಿ ನೇತೃತ್ವದ ಆರ್‌ಸಿಬಿ ತಂಡವು  ಆಡಿದ ಆರು ಪಂದ್ಯಗಳಲ್ಲಿ ಸೋಲುಂಡಿದೆ. ಇದರಿಂದ ಮುಂದಿನ ಪಂದ್ಯಗಳಲ್ಲಿ ತಂಡವನ್ನು ಗೆಲ್ಲಿಸುವ ತೀವ್ರ ಒತ್ತಡಕ್ಕೆ ಸಿಲುಕಿದ್ದಾರೆ. 

‘ವಿಶ್ವಕಪ್‌ಗೆ ಕೆಲವೇ ದಿನಗಳಿವೆ. ಹೀಗಾಗಿ, ಐಪಿಎಲ್‌ನ ಇನ್ನುಳಿದ ಪಂದ್ಯಗಳನ್ನು ಆಡಿಸದೇ, ವಿರಾಟ್‌ ಕೊಹ್ಲಿಗೆ ವಿಶ್ರಾಂತಿ ನೀಡಬೇಕು’ ಎಂದು ವಾನ್‌ ಅವರು ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ.

ಈಗಾಗಲೇ ಆರು ಪಂದ್ಯಗಳನ್ನು ಸೋತಿರುವ ಆರ್‌ಸಿಬಿ, ಪ್ಲೇ ಆಪ್‌ಗೆ ಪ್ರವೇಶಿಸಬೇಕಾದರೆ ಇನ್ನುಳಿದ 8 ಪಂದ್ಯಗಳನ್ನು ಗೆಲ್ಲಲೇಬೇಕಿದೆ. 

ಮೇ 31ರಿಂದ ಐಸಿಸಿ ವಿಶ್ವಕಪ್‌ ಆರಂಭಗೊಳ್ಳಲಿದ್ದು, ಭಾರತ ತಂಡವು ಜೂನ್‌ 5ರಂದು ದಕ್ಷಿಣ ಆಫ್ರಿಕಾ ತಂಡವನ್ನು ಎದುರಿಸಲಿದೆ. 

ಬರಹ ಇಷ್ಟವಾಯಿತೆ?

 • 3

  Happy
 • 0

  Amused
 • 0

  Sad
 • 1

  Frustrated
 • 2

  Angry

Comments:

0 comments

Write the first review for this !