ಬೆಂಗಳೂರು: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಏಕದಿನ ಕ್ರಿಕೆಟ್ ಸರಣಿ ಮಾಚ್ 17ರಿಂದ ಆರಂಭವಾಗಲಿದೆ.
ಭಾರತ ವಿರುದ್ಧದ ಏಕದಿನ ಸರಣಿಗೆ 16 ಆಟಗಾರರ ತಂಡವನ್ನು ಕ್ರಿಕೆಟ್ ಆಸ್ಟ್ರೇಲಿಯಾ (ಸಿಎ) ಪ್ರಕಟಿಸಿದೆ.
ಪ್ಯಾಟ್ ಕಮಿನ್ಸ್ ಆಸ್ಟ್ರೇಲಿಯಾ ತಂಡವನ್ನು ಮುನ್ನಡೆಸಲಿದ್ದಾರೆ. ಮೊದಲ ಏಕದಿನ ಪಂದ್ಯ ಮಾರ್ಚ್ 17 ರಂದು ಮುಂಬೈನಲ್ಲಿ ನಡೆಯಲಿದೆ, ಉಳಿದ ಎರಡು ಪಂದ್ಯಗಳು ವಿಶಾಖಪಟ್ಟಣ (ಮಾರ್ಚ್ 19) ಮತ್ತು ಚೆನ್ನೈನಲ್ಲಿ (ಮಾರ್ಚ್ 22) ನಡೆಯಲಿವೆ.
ಆಸ್ಟ್ರೇಲಿಯಾ ಏಕದಿನ ತಂಡ: ಪ್ಯಾಟ್ ಕಮ್ಮಿನ್ಸ್ (ನಾಯಕ), ಗ್ಲೆನ್ ಮ್ಯಾಕ್ಸ್‌ವೆಲ್, ಸ್ಟೀವ್ ಸ್ಮಿತ್, ಸೀನ್ ಅಬಾಟ್, ಆ್ಯಶ್ಟನ್ ಅಗರ್, ಅಲೆಕ್ಸ್ ಕ್ಯಾರಿ (ವಿಕೆಟ್‌ಕೀಪರ್), ಕ್ಯಾಮರೂನ್ ಗ್ರೀನ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮಾರ್ನಸ್ ಲಾಬುಷೇನ್, ಮಿಚೆಲ್ ಮಾರ್ಷ್, ಕೇನ್ ರಿಚರ್ಡ್‌ಸನ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಮತ್ತು ಆ್ಯಡಂ ಜಂಪಾ.
ಮಾರ್ಚ್ 1ರಂದು 3ನೇ ಟೆಸ್ಟ್ ಆರಂಭ: ಸದ್ಯ ಉಭಯ ತಂಡಗಳ ನಡುವೆ ಟೆಸ್ಟ್ ಸರಣಿ ನಡೆಯುತ್ತಿದ್ದು, 4 ಪಂದ್ಯಗಳ ಈ ಸರಣಿಯಲ್ಲಿ ಭಾರತ ಮೊದಲೆರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ.
ಮಾರ್ಚ್ 1ರಿಂದ ಇಂದೋರ್‌ನಲ್ಲಿ 3ನೇ ಟೆಸ್ಟ್ ಪಂದ್ಯ ಆರಂಭವಾಗಲಿದೆ. ಅಹಮದಾಬಾದ್‌ನಲ್ಲಿ ಕೊನೆಯ ಪಂದ್ಯ ನಡೆಯಲಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.