ಶುಕ್ರವಾರ, ಏಪ್ರಿಲ್ 10, 2020
19 °C

ಭಾರತೀಯ ಸಂಪ್ರಾದಾಯದಂತೆ ಮ್ಯಾಕ್ಸ್‌ವೆಲ್ ನಿಶ್ಚಿತಾರ್ಥ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೆಲ್ಬೋರ್ನ್‌: ಆಸ್ಟ್ರೇಲಿಯಾ ಕ್ರಿಕೆಟ್‌ ತಂಡದ ಸ್ಫೋಟಕ ಬ್ಯಾಟ್ಸ್‌ಮನ್‌ ಗ್ಲೇನ್‌ ಮ್ಯಾಕ್ಸ್‌ವೆಲ್‌ ಅವರು ಭಾರತ ಮೂಲದ ಚೆಲುವೆ ವಿನಿ ರಾಮನ್‌ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ನಿಶ್ಚಿತಾರ್ಥಕ್ಕೆ ಸಂಬಂಧಿಸಿದ ಚಿತ್ರಗಳನ್ನು ವಿನಿ ರಾಮನ್‌ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ನಿಶ್ಚಿತಾರ್ಥ ಫೋಟೊವನ್ನು ಹಂಚಿಕೊಂಡಿರುವ ಅವರು, ‘ಭಾರತೀಯ ಸಂಪ್ರದಾಯದಂತೆ ನಿಶ್ಚಿತಾರ್ಥ ನಡೆದಿದೆ. ಮದುವೆ ಎಂದರೆ ಹೇಗಿರಬೇಕು ಎಂಬುದರ ಸಣ್ಣ ಪರಿಚಯವನ್ನು ಮ್ಯಾಕ್ಸ್‌ವೆಲ್‌ಗೆ ಮಾಡಿಕೊಟ್ಟಿದ್ದೇನೆ. ಸಂಭ್ರಮವನ್ನು ಆಚರಿಸಲು ನಮ್ಮಿಬ್ಬರ ಕುಟುಂಬಗಳ ಸ್ನೇಹಿತರು ಆಗಮಿಸಿದ್ದರು. ಈ ವೇಳೆ ಹಾಜರಿದ್ದ ಎಲ್ಲರಿಗೂ ನಾವು ಕೃತಜ್ಞರಾಗಿದ್ದೇನೆ’ ಎಂದು ಬರೆದುಕೊಂಡಿದ್ದಾರೆ.

ಮದುವೆಯೂ ಭಾರತ ಸಂಪ್ರದಾಯದಂತೆಯೇ ನೆರವೇರಲಿದೆ. ಭಾರತ ಮೂಲದವರಾದ ವಿನಿ ರಾಮನ್‌, ಮೆಲ್ಬೋರ್ನ್‌ನಲ್ಲಿ ಜನಿಸಿದವರು. ಫಾರ್ಮಾಸಿಸ್ಟ್‌ ಆಗಿರುವ ಮೆಲ್ಬೋರ್ನ್‌ನಲ್ಲಿ ನೆಲೆಸಿದ್ದಾರೆ.

ಟಿ20 ಕ್ರಿಕೆಟ್‌ಗೆ ಹೇಳಿಮಾಡಿಸಿದ ಆಟಗಾರ ಎನಿಸಿರುವ ಮ್ಯಾಕ್ಸ್‌ವೆಲ್‌ ಹಾಗೂ ವಿನಿ ರಾಮನ್‌ 2017ರಲ್ಲಿ ಮೊದಲ ಸಲ ಭೇಟಿಯಾಗಿದ್ದರು. ಅದಾದ ಬಳಿಕ ಸಾಕಷ್ಟು ಸಲ ಜೊತೆಯಾಗಿ ಕಾಣಿಸಿಕೊಂಡಿದ್ದರು. ಜೊತೆಗಿರುವ ಚಿತ್ರಗಳನ್ನು ಈ ಜೋಡಿ ಸಾಮಾಜಿಕ ಮಾಧ್ಯಮಗಳಲ್ಲಿ ಸಾಕಷ್ಟು ಸಲ ಹಂಚಿಕೊಂಡಿತ್ತಾದರೂ, ಮದುವೆಯಾಗುವ ಬಗ್ಗೆ ಎಲ್ಲಿಯೂ ಹೇಳಿಕೆ ನೀಡಿರಲಿಲ್ಲ.

ಆಸ್ಟ್ರೇಲಿಯಾದ ಪ್ರಮುಖ ಆಲ್ರೌಂಡರ್ ಎನಿಸಿರುವ ಮ್ಯಾಕ್ಸ್‌ವೆಲ್‌ ಐಪಿಎಲ್‌ನಲ್ಲಿ ಕಿಂಗ್ಸ್‌ ಇಲವೆನ್‌ ಪಂಜಾಬ್‌ ತಂಡದ ಪರ ಆಡುತ್ತಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು