ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೀಟರ್ಸನ್ ಆಟವು ಗುಂಡಪ್ಪ ವಿಶ್ವನಾಥ್ ಅವರ ಆಟವನ್ನು ನೆನಪಿಸಿತು: ರವಿ ಶಾಸ್ತ್ರಿ

Last Updated 15 ಜನವರಿ 2022, 8:16 IST
ಅಕ್ಷರ ಗಾತ್ರ

ನವದೆಹಲಿ: ಭಾರತ ವಿರುದ್ಧದ ಮೂರನೇ ಟೆಸ್ಟ್ ಕ್ರಿಕೆಟ್ ಪಂದ್ಯದ ಎರಡು ಇನಿಂಗ್ಸ್‌ಗಳಲ್ಲಿ ಕ್ರಮವಾಗಿ 72 ಮತ್ತು 82 ರನ್ ಸಿಡಿಸುವ ಮೂಲಕ ದಕ್ಷಿಣ ಆಫ್ರಿಕಾದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ ಕೀಗನ್ ಪೀಟರ್ಸನ್ ಅವರ ಆಟವನ್ನು ಭಾರತ ತಂಡದ ಮಾಜಿ ಮುಖ್ಯ ಕೋಚ್ ರವಿಶಾಸ್ತ್ರಿ ಶ್ಲಾಘಿಸಿದ್ಧಾರೆ.

ದಕ್ಷಿಣ ಆಫ್ರಿಕಾದ ಬ್ಯಾಟರ್, ಭಾರತದ ದಂತಕಥೆ ಗುಂಡಪ್ಪ ವಿಶ್ವನಾಥ್ ಅವರನ್ನು ನೆನಪಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಇತ್ತೀಚೆಗೆ ಮುಕ್ತಾಯಗೊಂಡ ಟೆಸ್ಟ್ ಸರಣಿಯಲ್ಲಿ ಭಾರತವನ್ನು 2-1 ಅಂತರದಿಂದ ಸೋಲಿಸಿದ ದಕ್ಷಿಣ ಆಫ್ರಿಕಾದ ತಂಡದಲ್ಲಿ ಪೀಟರ್ಸನ್ ನಿರ್ಣಾಯಕ ಪಾತ್ರವಹಿಸಿದ್ದರು.

ಕೇಪ್ ಟೌನ್‌ನಲ್ಲಿ ನಡೆದ ಮೂರನೇ ಟೆಸ್ಟ್‌ನಲ್ಲಿ ಎರಡು ಅರ್ಧ ಶತಕಗಳನ್ನು ಸಿಡಿಸಿದ ಪೀಟರ್ಸನ್, ಪಂದ್ಯ ಶ್ರೇಷ್ಠ ಮತ್ತು ಸರಣಿ ಶ್ರೇಷ್ಠ ಗೌರವಕ್ಕೂ ಪಾತ್ರರಾದರು.

‘ಕೀಗನ್ ಪೀಟರ್ಸನ್ ಅವರ ಅತ್ಯುತ್ತಮ ಆಟವು ವಿಶ್ವದ ಶ್ರೇಷ್ಠ ಆಟಗಾರ. ನನ್ನ ಬಾಲ್ಯದ ಹೀರೊ ಗುಂಡಪ್ಪ ವಿಶ್ವನಾಥ್ ಅವರನ್ನು ನೆನಪಿಸಿತು’ ಎಂದು ಶಾಸ್ತ್ರಿ ಟ್ವೀಟ್ ಮಾಡಿದ್ದಾರೆ.

ತಮ್ಮ ಕಾಲದಲ್ಲಿ ಅತ್ಯುತ್ತಮ ಬ್ಯಾಟರ್‌ಗಳಲ್ಲಿ ಒಬ್ಬರೆಂದು ಪರಿಗಣಿಸಲ್ಪಟ್ಟಿದ್ದ ಬಲಗೈ ಬ್ಯಾಟರ್ ವಿಶ್ವನಾಥ್, ಭಾರತಕ್ಕಾಗಿ 91 ಟೆಸ್ಟ್ ಮತ್ತು 25 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಅತ್ಯುತ್ತಮ ಸ್ಕ್ವೇರ್ ಕಟ್‌ ಮಾಡುತ್ತಿದ್ದ ಅವರು ಬಲವಾದ ಮಣಿಕಟ್ಟುಗಳನ್ನು ಹೊಂದಿದ್ದರು. ಅದೇ ರೀತಿ 28ರ ಹರೆಯದ ಪೀಟರ್ಸನ್ ಕೂಡ ಬಲಿಷ್ಠ ಮಣಿಕಟ್ಟು ಹೊಂದಿದ್ದಾರೆ ಎಂದು ಅವರು ಹೇಳಿದ್ದಾರೆ.

ಪೀಟರ್ಸನ್ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಆರು ಇನ್ನಿಂಗ್ಸ್‌ಗಳಿಂದ 276 ರನ್‌ ಗಳಿಸಿದ್ದಾರೆ. ಇದರಲ್ಲಿ ಮೂರು ಅರ್ಧ ಶತಕಗಳಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT