ಶುಕ್ರವಾರ, ಡಿಸೆಂಬರ್ 2, 2022
20 °C
ಕ್ರಿಕೆಟ್‌: ಐಸಿಸಿ ಅಧ್ಯಕ್ಷರಾಗಿ ಗ್ರೆಗ್‌ ಬಾರ್ಕ್ಲೆ ಪುನರಾಯ್ಕೆ

ಹಣಕಾಸು ಸಮಿತಿಗೆ ಜಯ್‌ ಶಾ ಮುಖ್ಯಸ್ಥ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೆಲ್ಬರ್ನ್‌ (ಪಿಟಿಐ): ನ್ಯೂಜಿಲೆಂಡ್‌ನ ಗ್ರೆಗ್‌ ಬಾರ್ಕ್ಲೆ ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ ಸಮಿತಿ (ಐಸಿಸಿ) ಅಧ್ಯಕ್ಷರಾಗಿ ಸತತ ಎರಡನೇ ಅವಧಿಗೆ ಪುನರಾಯ್ಕೆಯಾಗಿದ್ದಾರೆ.

ಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ಜಯ್‌ ಶಾ ಅವರು ಐಸಿಸಿಯ ಹಣಕಾಸು ಮತ್ತು ವಾಣಿಜ್ಯ ವ್ಯವಹಾರಗಳ (ಎಫ್‌ ಮತ್ತು ಸಿಎ) ಸಮಿತಿಯ ಮುಖ್ಯಸ್ಥರಾಗಿ ಆಯ್ಕೆಯಾದರು.

ಮೆಲ್ಬರ್ನ್‌ನಲ್ಲಿ ನಡೆದ ಐಸಿಸಿ ಆಡಳಿತ ಮಂಡಳಿ ಸಭೆಯಲ್ಲಿ ಮುಂದಿನ ಎರಡು ವರ್ಷಗಳ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.

ಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಕಣದಲ್ಲಿದ್ದ ಇನ್ನೊಬ್ಬ ಸ್ಪರ್ಧಿ ಜಿಂಬಾಬ್ವೆಯ ತವೆಂಗ್ವ ಮುಕುಲನಿ ಅವರು ಸ್ಪರ್ಧೆಯಿಂದ ಹಿಂದೆ ಸರಿದರು. ಇದರಿಂದ ಬಾರ್ಕ್ಲೆ ಪುನರಾಯ್ಕೆ ಅವಿರೋಧವಾಗಿ ನಡೆಯಿತು.

‘ಸತತ ಎರಡನೇ ಅವಧಿಗೆ ಐಸಿಸಿಯ ಅಧ್ಯಕ್ಷನಾಗಿ ಆಯ್ಕೆಯಾಗಿರುವುದು ನನಗೆ ದೊರೆತ ದೊಡ್ಡ ಗೌರವ. ನನ್ನನ್ನು ಬೆಂಬಲಿಸಿದ ಐಸಿಸಿಯ ಎಲ್ಲ ನಿರ್ದೇಶಕರುಗಳಿಗೆ ಧನ್ಯವಾದ ಸಲ್ಲಿಸುತ್ತೇನೆ’ ಎಂದು ಬಾರ್ಕ್ಲೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು