ಶನಿವಾರ, 10 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IPL | ಉದ್ಘಾಟನಾ ಪಂದ್ಯಕ್ಕೆ ಧೋನಿ ಫಿಟ್; ಟಾಸ್ ಗೆದ್ದ ಹಾಲಿ ಚಾಂಪಿಯನ್ ಗುಜರಾತ್

Last Updated 31 ಮಾರ್ಚ್ 2023, 14:08 IST
ಅಕ್ಷರ ಗಾತ್ರ

ಅಹಮದಾಬಾದ್: ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್‌) ಟಿ20 ಕ್ರಿಕೆಟ್ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಗುಜರಾತ್‌ ಟೈಟನ್ಸ್‌ ಹಾಗೂ ಚೆನ್ನೈ ಸೂಪರ್‌ ಕಿಂಗ್ಸ್‌ ಮುಖಾಮುಖಿಯಾಗಿವೆ. ಟಾಸ್‌ ಗೆದ್ದಿರುವ ಟೈಟನ್ಸ್‌ ನಾಯಕ ಹಾರ್ದಿಕ್‌ ಪಾಂಡ್ಯ ಬೌಲಿಂಗ್‌ ಆಯ್ದುಕೊಂಡಿದ್ದಾರೆ.

ಮೊಟೇರಾದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಯುತ್ತಿರುವ ಈ ಪಂದ್ಯದಲ್ಲಿ, ಚೆನ್ನೈ ಪರ ಡೆವೋನ್ ಕಾನ್ವೆ ಮತ್ತು ಋತುರಾಜ್‌ ಗಾಯಕವಾಡ್‌ ಇನಿಂಗ್ಸ್‌ ಆರಂಭಿಸಿದ್ದಾರೆ.

ಹಾರ್ದಿಕ್‌ ನೇತೃತ್ವದ ಗುಜರಾತ್‌ ಕಳೆದ ವರ್ಷವಷ್ಟೇ ಐಪಿಎಲ್‌ಗೆ ಪದಾರ್ಪಣೆ ಮಾಡಿತ್ತು. ಮೊದಲ ಆವೃತ್ತಿಯಲ್ಲೇ ಚಾಂಪಿಯನ್‌ ಆದ ವಿಶ್ವಾಸದಲ್ಲಿರುವ ಈ ತಂಡಕ್ಕೆ ನಾಲ್ಕು ಬಾರಿಯ ಚಾಂಪಿಯನ್‌ ಚೆನ್ನೈ ಸವಾಲಾಗಲಿದೆ.

ಈ ಬಾರಿ ನ್ಯೂಜಿಲೆಂಡ್‌ನ ಕೇನ್ ವಿಲಿಯಮ್ಸನ್ ಗುಜರಾತ್ ತಂಡದಲ್ಲಿ ಆಡುತ್ತಿರುವುದು ಹಾರ್ದಿಕ್ ಪಡೆಯ ಆತ್ಮವಿಶ್ವಾಸ ಹೆಚ್ಚಿಸಿದೆ. ಇಂಗ್ಲೆಂಡ್‌ನ ಬೆನ್ ಸ್ಟೋಕ್ಸ್‌ ಆಗಮನದಿಂದ ಚೆನ್ನೈ ಬಳಗದ ಶಕ್ತಿಯೂ ಹೆಚ್ಚಾಗಿದೆ.

ಉಭಯ ತಂಡಗಳೂ ಉತ್ತಮ ಆಲ್‌ರೌಂಡರ್‌ಗಳನ್ನು ಹೊಂದಿರುವುದು ರೋಚಕ ಹಣಾಹಣಿಯ ನಿರೀಕ್ಷೆ ಹುಟ್ಟಿಸಿದೆ.

ಧೋನಿ ಫಿಟ್‌
ಎಡ ಮೊಣಕಾಲಿಗೆ ಗಾಯ ಮಾಡಿಕೊಂಡಿದ್ದ ಸೂಪರ್ ಕಿಂಗ್ಸ್ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ಗಾಯದಿಂದ ಚೇತರಿಸಿಕೊಂಡಿದ್ದು, ತಂಡ ಮುನ್ನಡೆಸುತ್ತಿದ್ದಾರೆ. ಅವರು ಇಂದು ಕಣಕ್ಕಿಳಿಯುವ ಬಗ್ಗೆ ಅನುಮಾನಗಳು ಮೂಡಿದ್ದವು. ಧೋನಿ ಉಪಸ್ಥಿತಿಯು ತಂಡದ ಬಲ ವೃದ್ಧಿಸಿದೆ.

ಆಡುವ ಹನ್ನೊಂದರ ಬಳಗ
ಚೆನ್ನೈ ಸೂಪರ್ ಕಿಂಗ್ಸ್: ಮಹೇಂದ್ರಸಿಂಗ್ ಧೋನಿ (ನಾಯಕ), ಋತುರಾಜ್ ಗಾಯಕವಾಡ್, ಅಂಬಟಿ ರಾಯುಡು, ಮೋಯಿನ್ ಅಲಿ, ಬೆನ್ ಸ್ಟೋಕ್ಸ್, ಶಿವಂ ದುಬೆ, ರವೀಂದ್ರ ಜಡೇಜ, ಡೆವೊನ್ ಕಾನ್ವೆ, ಮಿಚೆಲ್ ಸ್ಯಾಂಟನರ್, ದೀಪಕ್ ಚಾಹರ್, ರಾಜವರ್ಧನ್ ಹಂಗರೇಕರ್

ಗುಜರಾತ್ ಟೈಟನ್ಸ್: ಹಾರ್ದಿಕ್ ಪಾಂಡ್ಯ (ನಾಯಕ), ವೃದ್ಧಿಮಾನ್ ಸಹಾ, ಕೇನ್ ವಿಲಿಯಮ್ಸನ್, ಶುಭಮನ್ ಗಿಲ್, ವಿಜಯ್ ಶಂಕರ್‌, ರಾಹುಲ್ ತೆವಾಟಿಯಾ, ರಶೀದ್ ಖಾನ್, ಜೋಶುವಾ ಲಿಟಲ್, ಮೊಹಮ್ಮದ್ ಶಮಿ, ಅಲ್ಜರಿ ಜೋಸೆಫ್, ಯಶ್ ದಯಾಳ್.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT