ನವದೆಹಲಿ: ಮುಂಬರುವ ಅಫ್ಗಾನಿಸ್ತಾನ ವಿರುದ್ಧದ ಟೆಸ್ಟ್ ಹಾಗೂ ಏಕದಿನ ಸರಣಿಗಾಗಿ ಶುಭಮನ್ ಗಿಲ್ ನಾಯಕತ್ವದ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಈ ತಂಡದಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಗುಜರಾತ್ ಟೈಟನ್ಸ್ ಪರ ಆಡುತ್ತಿರುವ 7 ಆಟಗಾರರನ್ನು ಆಯ್ಕೆ ಮಾಡಲಾಗಿದೆ.

ಜೂನ್ 6ರಿಂದ ಮುಲ್ಲನ್ಪುರದಲ್ಲಿ ನಡೆಯುವ ಏಕೈಕ ಟೆಸ್ಟ್ ಪಂದ್ಯಕ್ಕೆ ಅಂತಿಮಗೊಳಿಸಲಾದ 15 ಸದಸ್ಯರ ತಂಡದಲ್ಲಿ 7 ಮಂದಿ ಗುಜರಾತ್ ಟೈಟನ್ಸ್ ಆಟಗಾರರಿದ್ದಾರೆ. ನಾಯಕ ಶುಭಮನ್ ಗಿಲ್ ಸೇರಿದಂತೆ ಇಬ್ಬರು ಹೊಸ ಮುಖಗಳಿಗೂ ಅವಕಾಶ ನೀಡಲಾಗಿದೆ.

ಯಾವೆಲ್ಲಾ ಗುಜರಾತ್ ಆಟಗಾರರು ಇದ್ದಾರೆ?

ಶುಭಮನ್ ಗಿಲ್ ನಾಯಕನಾಗಿ ತಂಡವನ್ನು ಮುನ್ನಡೆಸುತ್ತಿದ್ದರೆ, ಸಾಯಿ ಸುದರ್ಶನ್, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಪ್ರಸಿದ್ಧ ಕೃಷ್ಣ, ಮಾನವ್ ಸುತಾರ್ ಮತ್ತು ಗುರ್ನೂರ್ ಬ್ರಾರ್ ಅವರು ಭಾರತ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇದರಲ್ಲಿ ಮಾನವ್ ಸುತಾರ್ ಹಾಗೂ ಗುರ್ನೂರ್ ಬ್ರಾರ್ ಅವರು ಇದೇ ಮೊದಲ ಬಾರಿಗೆ ಭಾರತ ತಂಡದಲ್ಲಿ ಸ್ಥಾನ ಗಿಟ್ಟಿಸಿದ್ದಾರೆ.

ಧರ್ಮಶಾಲಾ, ಲಖನೌ ಮತ್ತು ಚೆನ್ನೈನಲ್ಲಿ ನಡೆಯಲಿರುವ ಏಕದಿನ ತಂಡದಲ್ಲಿ ಗಿಲ್ ಅವರ ಜೊತೆ ಸಿರಾಜ್, ಸುಂದರ್, ಕೃಷ್ಣ ಮತ್ತು ಬ್ರಾರ್ ಅವರು ಗುಜರಾತ್ ಟೈಟನ್ಸ್ ತಂಡದಿಂದ ಸ್ಥಾನ ಪಡೆದಿದ್ದಾರೆ. ಏಕದಿನ ಸರಣಿಯಲ್ಲಿ ಟೆಸ್ಟ್ ಹಾಗೂ ಟಿ20ಯಿಂದ ನಿವೃತ್ತಿ ಪಡೆದಿರುವ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಕೂಡ ತಂಡದ ಭಾಗವಾಗಿದ್ದಾರೆ.

ಟೆಸ್ಟ್ ತಂಡ: ಶುಭಮನ್ ಗಿಲ್(ನಾಯಕ), ಯಶಸ್ವಿ ಜೈಸ್ವಾಲ್, ಕೆ.ಎಲ್ ರಾಹುಲ್(ಉಪ ನಾಯಕ), ಸಾಯಿ ಸುದರ್ಶನ್, ರಿಷಬ್ ಪಂತ್ (ವಿಕೆಟ್ ಕೀಪರ್), ಧ್ರುವ ಜುರೆಲ್ (ವಿಕೆಟ್ ಕೀಪರ್), ದೇವದತ್ತ ಪಡಿಕ್ಕಲ್, ನಿತೀಶ್ ಕುಮಾರ್ ರೆಡ್ಡಿ. ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ ಕೃಷ್ಣ, ಮಾನವ್ ಸುತಾರ್, ಗುರ್ನೂರ್ ಬ್ರಾರ್, ಹರ್ಷ್ ದುಬೆ

ಏಕದಿನ ತಂಡ: ಶುಭಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪ ನಾಯಕ), ಕೆ.ಎಲ್ ರಾಹುಲ್(ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಪ್ರಸಿದ್ಧ ಕೃಷ್ಣ, ಪ್ರಿನ್ಸ್ ಯಾದವ್, ಗುರ್ನೂರ್ ಬ್ರಾರ್, ಹರ್ಷ್ ದುಬೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.