ನವದೆಹಲಿ: ಗುಜರಾತ್ ಟೈಟನ್ಸ್ (ಜಿಟಿ) ಬ್ಯಾಟರ್ ಕೇನ್ ವಿಲಿಯಮ್ಸನ್ 2023ರ ಐಪಿಎಲ್ ಆವೃತ್ತಿಯಿಂದ ಹೊರಗುಳಿದಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಗುಜರಾತ್ ತಂಡ, ‘ನಾವು ಈ ವಿಷಯ ತಿಳಸಲು ವಿಷಾದಿಸುತ್ತೇವೆ. ಕೇನ್ ವಿಲಿಯಮ್ಸನ್ ಅವರು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಉದ್ಘಾಟನಾ ಪಂದ್ಯದಲ್ಲಿ ಗಾಯಗೊಂಡಿದ್ದರು. ಹೀಗಾಗಿ ಈ ಟೂರ್ನಿಯಲ್ಲಿ ಅವರು ಆಡುತ್ತಿಲ್ಲ. ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ, ಮತ್ತೆ ತಂಡಕ್ಕೆ ಮರಳಲಿ ಎಂದು ಆಶಿಸುತ್ತೇವೆ’ ಎಂದು ಹೇಳಿದೆ.
32 ವರ್ಷದ ವಿಲಿಯಮ್ಸನ್ ಅವರು ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ವಿರುದ್ಧದ ಪಂದ್ಯದ ವೇಳೆ, ಬೌಂಡರಿ ಲೈನ್ ಬಳಿ ಕ್ಯಾಚ್ ಹಿಡಿಯುವಾಗ ಮೊಣಕಾಲಿನ ಗಾಯಕ್ಕೆ ಒಳಗಾಗಿದ್ದರು.
ಈ ಪಂದ್ಯದಲ್ಲಿ ವಿಲಿಯಮ್ಸನ್ ಬದಲಿಗೆ ಸಾಯಿ ಸುದರ್ಶನ್ ಅವರು ‘ಇಂಪ್ಯಾಕ್ಟ್ ಪ್ಲೇಯರ್’ ಆಗಿ ಆಡಿದ್ದರು
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.