ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IPL 2022: ನಮ್ಮ ತಂಡ ಏನನ್ನೂ ಸಾಬೀತು ಮಾಡಬೇಕಿಲ್ಲ: ಹಾರ್ದಿಕ್ ಪಾಂಡ್ಯ

Last Updated 19 ಮಾರ್ಚ್ 2022, 5:18 IST
ಅಕ್ಷರ ಗಾತ್ರ

ನವದೆಹಲಿ: ಇಂಡಿಯನ್ ಪ್ರೀಮಿಯನ್ ಲೀಗ್ (ಐಪಿಎಲ್) ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ತಮ್ಮ ತಂಡ ಏನನ್ನೂ ಸಾಬೀತು ಮಾಡಬೇಕಿಲ್ಲ. ಆಟಗಾರರಿಗೆ ತಮ್ಮ ಸಾಮರ್ಥ್ಯವನ್ನುಪ್ರದರ್ಶಿಸಲು ಉತ್ತಮ ವಾತಾವರಣ ಸೃಷ್ಟಿಸುವುದು ನಮ್ಮ ಗುರಿಯಾಗಿದೆ ಎಂದು ನೂತನ ಗುಜರಾತ್ ಟೈಟನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಹೇಳಿದ್ದಾರೆ.

2015ರಲ್ಲಿ ಐಪಿಎಲ್‌ಗೆ ಕಾಲಿಟ್ಟ ಬಳಿಕ ಹಾರ್ದಿಕ್ ಪಾಂಡ್ಯ, ಮುಂಬೈ ಇಂಡಿಯನ್ಸ್ ತಂಡವನ್ನು ಪ್ರತಿನಿಧಿಸಿದ್ದರಲ್ಲದೆ ತಂಡದ ಯಶಸ್ಸಿನಲ್ಲಿ ಮಹತ್ವದ ಪಾತ್ರ ವಹಿಸಿದ್ದರು.

ಆದರೆ ಪದೇ ಪದೇ ಗಾಯದ ಸಮಸ್ಯೆಗೆ ಒಳಗಾಗುತ್ತಿದ್ದುದರಿಂದ ಮುಂಬೈ ತಂಡವು ಈ ಬಾರಿಯ ಮೆಗಾ ಹರಾಜಿನ ಸಂದರ್ಭದಲ್ಲಿ ಅವರನ್ನು ತಂಡದಿಂದ ಕೈಬಿಟ್ಟಿತ್ತು.

ಬಳಿಕ ನೂತನ ಗುಜರಾತ್ ಫ್ರಾಂಚೈಸ್, ಡ್ರಾಫ್ಟ್ ಮೂಲಕ ಹಾರ್ದಿಕ್ ಅವರನ್ನು ತಮ್ಮ ತೆಕ್ಕೆಗೆ ಸೇರಿಸಿತ್ತಲ್ಲದೆ ತಂಡದ ನಾಯಕನನ್ನಾಗಿ ಘೋಷಣೆ ಮಾಡಿತು.

'ನಾನು ನನ್ನ ಕುಟುಂಬದೊಂದಿಗೆ ಸಮಯ ಕಳೆಯುತ್ತಿದ್ದೆ. ಉತ್ತಮ ತಯಾರಿ ನಡೆಸುತ್ತಿದ್ದೇನೆ ಎಂಬುದನ್ನು ಖಚಿತಪಡಿಸಿಕೊಳ್ಳಲು ಎಂದಿನಂತೆ ಕಠಿಣ ಪರಿಶ್ರಮ ವಹಿಸುತ್ತಿದ್ದೇನೆ. ನಮ್ಮ ತಂಡದ ಆಯ್ಕೆಯ ಬಗ್ಗೆಯೂ ಸಂತುಷ್ಟಗೊಂಡಿದ್ದೇನೆ. ಇದೊಂದು ಹೊಸ ತಂಡವಾಗಿದ್ದು, ಪ್ರಾಮಾಣಿಕವಾಗಿ ಹೇಳಬೇಕೆಂದರೆ ಯಾರಿಗೂ ಏನನ್ನೂ ಸಾಬೀತು ಮಾಡಬೇಕಿಲ್ಲ. ನಾವು ಉತ್ತಮ ಕ್ರಿಕೆಟ್ ಆಡಲು ಇಲ್ಲಿದ್ದೇವೆ. ಆಟಗಾರರು ತಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಉತ್ತಮ ಆಟವನ್ನು ಪ್ರದರ್ಶಿಸಲು ಉತ್ತಮ ವಾತಾವರಣ ನಿರ್ಮಿಸುವುದು ನಮ್ಮ ಗುರಿಯಾಗಿದೆ' ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT