ಕ್ರಿಕೆಟ್ ಆಡಿ ಸಂಭ್ರಮಿಸಿದ ಹರ್ಭಜನ್, ಮೊಹಮ್ಮದ್ ಕೈಫ್: ವಿಡಿಯೊ ವೈರಲ್

ನವದೆಹಲಿ: ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗರಾದ ಹರ್ಭಜನ್ ಸಿಂಗ್ ಮತ್ತು ಮೊಹಮ್ಮದ್ ಕೈಫ್ ಒಟ್ಟಿಗೆ ಕ್ರಿಕೆಟ್ ಆಡುವ ಮೂಲಕ ಗಮನ ಸೆಳೆದಿದ್ದಾರೆ.
ಹೃದಯದ ಎಮೋಜಿಯೊಂದಿಗೆ ಫೇಸ್ಬುಕ್ನಲ್ಲಿ ವಿಡಿಯೊ ಪೋಸ್ಟ್ ಮಾಡಿರುವ ಹರ್ಭಜನ್ ಸಿಂಗ್, ‘ಇದು ಮೇಲ್ಛಾವಣಿ ಕ್ರಿಕೆಟ್, ಇಲ್ಲಿನ ನಿಯಮಗಳು ವಿಭಿನ್ನವಾಗಿರುತ್ತವೆ’ ಎಂದು ಬರೆದುಕೊಂಡಿದ್ದಾರೆ.
24 ಸೆಕೆಂಡ್ಗಳ ಈ ವಿಡಿಯೊವನ್ನು 2.5 ಲಕ್ಷಕ್ಕೂ ಅಧಿಕ ಮಂದಿ ವೀಕ್ಷಿಸಿದ್ದಾರೆ. 8 ಸಾವಿರಕ್ಕೂ ಹೆಚ್ಚು ಮಂದಿ ಇಷ್ಟಪಟ್ಟಿದ್ದಾರೆ.
ಈ ವಿಡಿಯೊ ವೀಕ್ಷಿಸಿರುವ ಕ್ರೀಡಾಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಹರ್ಭಜನ್ ಇತ್ತೀಚೆಗೆ ಆಮ್ ಆದ್ಮಿ ಪಕ್ಷದಿಂದ (ಎಎಪಿ) ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ.
ಹರ್ಭಜನ್ –ಕೈಫ್ ಇಬ್ಬರು ಬಹುಕಾಲದ ಗೆಳೆಯರು. ಕ್ರಿಕೆಟ್ನಿಂದ ನಿವೃತ್ತಿ ಪಡೆದ ಬಳಿಕವೂ ಇಬ್ಬರ ನಡುವೆ ಉತ್ತಮ ಬಾಂಧವ್ಯವಿದೆ. ಇದೀಗ ಇಬ್ಬರೂ ಒಟ್ಟಿಗೆ ಕ್ರಿಕೆಟ್ ಆಡುವ ಮೂಲಕ ಹಳೆಯ ನೆನಪುಗಳನ್ನು ಮೆಲುಕು ಹಾಕಿದ್ದಾರೆ.
ಓದಿ... ವಿಡಿಯೊ: ಒಂದು ಕೈಯಲ್ಲಿ ಅದ್ಭುತ ಕ್ಯಾಚ್ ಹಿಡಿದ ಪಂತ್, ಶ್ರೇಯಸ್ ಅಯ್ಯರ್ ಔಟ್!
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.