ನವದೆಹಲಿ: ಭಾರತೀಯ ಕ್ರಿಕೆಟಿಗ ಹರಭಜನ್ ಸಿಂಗ್ ಎಲ್ಲ ಪ್ರಕಾರದ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.
ಈ ಕುರಿತು ವಿಡಿಯೊ ಸಂದೇಶವನ್ನು ಹಂಚಿಕೊಂಡಿದ್ದಾರೆ. 23 ವರ್ಷಗಳ ಸುದೀರ್ಘ ಪ್ರಯಾಣದಲ್ಲಿ ತಮ್ಮ ಜೀವನದಲ್ಲಿ ಎಲ್ಲವನ್ನೂ ನೀಡಿರುವ ಆಟಕ್ಕೆ ವಿದಾಯ ಘೋಷಿಸುವ ಸಮಯ ಬಂದಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಹರಭಜನ್ ಸಿಂಗ್ ಸೆಲ್ಫಿ ಕ್ಲಿಕ್ಕಿಸಿದ ಸಿಧು; ಕಾಂಗ್ರೆಸ್‌ಗೆ ಸೇರ್ಪಡೆ?
ಹರಭಜನ್ ಸಿಂಗ್ ಭಾರತ ತಂಡವನ್ನು 103 ಟೆಸ್ಟ್, 236 ಏಕದಿನ ಹಾಗೂ 28 ಟ್ವೆಂಟಿ-20 ಪಂದ್ಯಗಳಲ್ಲಿ ಪ್ರತಿನಿಧಿಸಿದ್ದಾರೆ. ಹಾಗೆಯೇ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ (ಐಪಿಎಲ್) 163 ಪಂದ್ಯಗಳನ್ನು ಆಡಿದ್ದಾರೆ.
1998ನೇ ಇಸವಿಯಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಕಾಲಿಟ್ಟಿದ್ದ 'ಟರ್ಬನೇಟರ್' ಖ್ಯಾತಿಯ ಹರಭಜನ್ ಸಿಂಗ್ ಭಾರತಕ್ಕೆ ಹಲವಾರು ಸ್ಮರಣೀಯ ಗೆಲುವುಗಳನ್ನು ಒದಗಿಸಿಕೊಟ್ಟಿದ್ದಾರೆ. ಈಡನ್ ಗಾರ್ಡನ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಐತಿಹಾಸಿಕ ಟೆಸ್ಟ್ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದ್ದರು.
ಟೆಸ್ಟ್‌ನಲ್ಲಿ 417, ಏಕದಿನದಲ್ಲಿ 269 ಹಾಗೂ ಟ್ವೆಂಟಿ-20 ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 25 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ 84 ರನ್ ತೆತ್ತು ಎಂಟು ವಿಕೆಟ್ ಗಳಿಸಿರುವುದು ಸರ್ವಶ್ರೇಷ್ಠ ಸಾಧನೆಯಾಗಿದೆ.
ಹರಭಜನ್ ರಾಜಕೀಯಕ್ಕೆ ಪ್ರವೇಶ?
ಇತ್ತೀಚೆಗೆ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಅವರನ್ನು ಭೇಟಿಯಾಗಿರುವ ಹರಭಜನ್ ಸಿಂಗ್, ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿವೆ.
ಹರಭಜನ್ ಅವರೊಂದಿಗೆ ಸೆಲ್ಫಿ ಹಂಚಿದ್ದ ಸಿಧು, 'ಚಿತ್ರವು ಅನೇಕ ಸಾಧ್ಯತೆಗಳೊಂದಿಗೆ ತುಂಬಿದೆ...ಮಿಂಚಿನ ತಾರೆ ಭಜ್ಜಿ ಅವರೊಂದಿಗೆ' ಎಂದು ಟ್ಟೀಟಿಸಿದ್ದರು.
ವಿಡಿಯೊ: ಹರಭಜನ್ ಸಿಂಗ್ ವಿದಾಯ ಘೋಷಣೆ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.