ನವದೆಹಲಿ: 2011ರ ಏಕದಿನ ವಿಶ್ವಕಪ್ ವಿಜೇತ ಭಾರತ ತಂಡದ ಸದಸ್ಯ ಆಫ್ ಸ್ಪಿನ್ನರ್ ಹರಭಜನ್ ಸಿಂಗ್ ಎಲ್ಲ ಪ್ರಕಾರದ ಕ್ರಿಕೆಟ್‌ಗೂ ವಿದಾಯ ಘೋಷಿಸಿದ್ದಾರೆ.
23 ವರ್ಷಗಳ ಸುದೀರ್ಘ ವೃತ್ತಿ ಜೀವನದಲ್ಲಿ ಹರಭಜನ್ ಸಿಂಗ್ ಸಾಧನೆಯನ್ನು ಕ್ರಿಕೆಟ್ ಲೋಕದ ಪ್ರಮುಖರು ಕೊಂಡಾಡಿದ್ದಾರೆ.
ಇದನ್ನೂ ಓದಿ:ಕ್ರಿಕೆಟ್‌ಗೆ 'ಟರ್ಬನೇಟರ್' ಹರಭಜನ್ ಸಿಂಗ್ ವಿದಾಯ; ರಾಜಕೀಯ ಪ್ರವೇಶ?
2007ರಲ್ಲಿ ಚೊಚ್ಚಲ ಟ್ವೆಂಟಿ-20 ವಿಶ್ವಕಪ್ ಗೆಲುವಿನಲ್ಲೂ ಹರಭಜನ್ ಸಿಂಗ್ ಮಹತ್ವದ ಪಾತ್ರ ವಹಿಸಿದ್ದರು.
ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿರುವ ಹರಭಜನ್ ಸಿಂಗ್ ಅವರಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಶುಭ ಕೋರಿದೆ.
ಹರಭಜನ್ ಸಿಂಗ್ ನೈಜ ಹೋರಾಟಗಾರ ಎಂದು ಮಾಜಿ ಆಟಗಾರ ವಿವಿಎಸ್ ಲಕ್ಷ್ಮಣ್ ಬಣ್ಣಿಸಿದ್ದಾರೆ.
ಹರಭಜನ್ ಸಿಂಗ್ ಭಾರತೀಯ ಕ್ರಿಕೆಟ್ ಅಷ್ಟೇ ಅಲ್ಲದೆ ವಿಶ್ವ ಕ್ರಿಕೆಟ್‌ನ ಅತ್ಯುತ್ತಮ ಆಟಗಾರರಲ್ಲಿ ಒಬ್ಬರು. ನಿಮ್ಮೊಂದಿಗೆ ಆಡಲು ಸಾಧ್ಯವಾಗಿರುವುದು ನನಗೆ ಸಂದ ಗೌರವ ಎಂದು ವೇಗದ ಬೌಲರ್ ಎಸ್. ಶ್ರೀಶಾಂತ್ ಅಭಿಪ್ರಾಯಪಟ್ಟಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.