ಗುರುವಾರ , ಮೇ 26, 2022
26 °C

ರಾಜಕೀಯದ ಮೂಲಕ ಪಂಜಾಬ್‌ಗೆ ಸೇವೆ ಸಲ್ಲಿಸುತ್ತೇನೆ: ಹರಭಜನ್‌ ಸಿಂಗ್

ಪ್ರಜಾವಾಣಿ ವೆಬ್‌ ಡೆಸ್ಕ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ರಾಜಕೀಯದ ಮೂಲಕ ಪಂಜಾಬ್‌ಗೆ ಸೇವೆ ಸಲ್ಲಿಸುತ್ತೇನೆ ಎಂದು ಮಾಜಿ ಕ್ರಿಕೆಟಿಗ ಹರಭಜನ್ ಸಿಂಗ್‌ ತಿಳಿಸಿದ್ದಾರೆ. ಈ ಕುರಿತು ಸುದ್ದಿಸಂಸ್ಥೆ ‘ಎಎನ್‌ಐ’ ಟ್ವೀಟ್‌ ಮಾಡಿದೆ. 

ಪಂಜಾಬ್‌ ಚುನಾವಣೆಗೆ ಮುಂಚಿತವಾಗಿ ಹರಭಜನ್‌ ಸಿಂಗ್ ಅವರು ಕಾಂಗ್ರೆಸ್‌ ಪಕ್ಷಕ್ಕೆ ಸೇರಲಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ. 

ಈ ಹಿನ್ನೆಲೆಯಲ್ಲಿ ಮಾತನಾಡಿರುವ ಹರಭಜನ್‌ ಸಿಂಗ್‌, ‘ನನಗೆ ಎಲ್ಲಾ ಪಕ್ಷದ ರಾಜಕಾರಣಿಗಳೂ ಗೊತ್ತು. ನಾನು ರಾಜಕೀಯದ ಮೂಲಕ ಪಂಜಾಬ್‌ಗೆ ಸೇವೆ ಸಲ್ಲಿಸುತ್ತೇನೆ. ಆದರೆ, ಈ ವರೆಗೆ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ’ ಎಂದು ಹೇಳಿದ್ದಾರೆ. 

ಹರಭಜನ್ ಸಿಂಗ್ ಅವರು ಎಲ್ಲ ಪ್ರಕಾರದ ಕ್ರಿಕೆಟ್‌ಗೆ ಶುಕ್ರವಾರ ನಿವೃತ್ತಿ ಘೋಷಿಸಿದ್ದಾರೆ. 

ಹರಭಜನ್ ಸಿಂಗ್ ಭಾರತ ತಂಡವನ್ನು 103 ಟೆಸ್ಟ್, 236 ಏಕದಿನ ಹಾಗೂ 28 ಟ್ವೆಂಟಿ-20 ಪಂದ್ಯಗಳಲ್ಲಿ ಪ್ರತಿನಿಧಿಸಿದ್ದಾರೆ. ಹಾಗೆಯೇ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ (ಐಪಿಎಲ್) 163 ಪಂದ್ಯಗಳನ್ನು ಆಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು