ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಐಸಿಸಿ ರ‍್ಯಾಂಕಿಂಗ್: ಆಲ್‌ರೌಂಡರ್ ಅಗ್ರಸ್ಥಾನಕ್ಕೆ ಹಾರ್ದಿಕ್

Published 3 ಜುಲೈ 2024, 18:36 IST
Last Updated 3 ಜುಲೈ 2024, 18:36 IST
ಅಕ್ಷರ ಗಾತ್ರ

ದುಬೈ: ಭಾರತ ಕ್ರಿಕೆಟ್ ತಂಡದ ಆಟಗಾರ ಹಾರ್ದಿಕ್ ಪಾಂಡ್ಯ  ಅವರು ಐಸಿಸಿ ಟಿ20 ಕ್ರಿಕೆಟ್ ಆಲ್‌ರೌಂಡರ್ಸ್‌ ವಿಭಾಗದ ರ‍್ಯಾಂಕಿಂಗ್‌ನಲ್ಲಿ ಜಂಟಿ ಅಗ್ರಸ್ಥಾನಕ್ಕೇರಿದರು.

ಶ್ರೀಲಂಕಾದ ವನಿಂದು ಹಸರಂಗಾ ಮತ್ತು ಹಾರ್ದಿಕ್ ಅವರು ತಲಾ 222 ಅಂಕಗಳನ್ನು ಗಳಿಸಿದ್ದು ಅಗ್ರಸ್ಥಾನ ಹಂಚಿಕೊಂಡಿದ್ದಾರೆ. ಟಿ20 ವಿಶ್ವಕಪ್ ಟೂರ್ನಿಯಲ್ಲಿ ಉತ್ತಮ ಸಾಧನೆ ಮಾಡಿದ್ದ ಹಾರ್ದಿಕ್  ರ‍್ಯಾಂಕಿಂಗ್‌ ಪಟ್ಟಿಯಲ್ಲಿ ಮೂರು ಸ್ಥಾನಗಳ ಬಡ್ತಿ ಪಡೆದಿದ್ದಾರೆ.

ವಿಶ್ವಕಪ್ ಟೂರ್ನಿಯಲ್ಲಿ ಪಾಂಡ್ಯ 150ರ ಸ್ಟ್ರೈಕ್‌ರೇಟ್‌ನಲ್ಲಿ 144 ರನ್‌ ಗಳಿಸಿದ್ದರು. ಅಲ್ಲದೇ 11 ವಿಕೆಟ್‌ಗಳನ್ನೂ ಪಡೆದಿದ್ದರು.

ಫೈನಲ್ ಪಂದ್ಯದ ನಿರ್ಣಾಯಕ ಹಂತದಲ್ಲಿ ದಕ್ಷಿಣ ಆಫ್ರಿಕಾದ ಹೆನ್ರಿಚ್ ಕ್ಲಾಸೆನ್ ಮತ್ತು ಡೇವಿಡ್ ಮಿಲ್ಲರ್ ವಿಕೆಟ್‌ಗಳನ್ನು ಗಳಿಸಿದ್ದ ಹಾರ್ದಿಕ್ ಪಂದ್ಯದ ಜಯಕ್ಕೆ ಕಾರಣರಾಗಿದ್ದರು.

ಭಾರತದ ಎಡಗೈ ಆಲ್‌ರೌಂಡರ್ ಅಕ್ಷರ್ ಪಟೇಲ್ ಏಳು ಸ್ಥಾನಗಳ ಬಡ್ತಿಯೊಂದಿಗೆ 12ನೇ ಸ್ಥಾನಕ್ಕೆ ಜಿಗಿದಿದ್ದಾರೆ.

ಬೌಲಿಂಗ್ ವಿಭಾಗದಲ್ಲಿ ಜಸಪ್ರೀತ್ ಬೂಮ್ರಾ ಅವರು 12ನೇ ಸ್ಥಾನಕ್ಕೆ ಏರಿದ್ದಾರೆ. ಅವರು 2020ರ ನಂತರ ಮಾಡಿದ ಉತ್ತಮ ಸಾಧನೆ ಇದಾಗಿದೆ. ಟಿ20 ವಿಶ್ವಕಪ್ ಟೂರ್ನಿಯಲ್ಲಿ ಅವರು 15 ವಿಕೆಟ್‌ಗಳನ್ನು ಗಳಿಸಿದ್ದರು.

ಇಂಗ್ಲೆಂಡ್ ತಂಡದ ಆದಿಲ್ ರಶೀದ್ ಅಗ್ರಸ್ಥಾನದಲ್ಲಿದ್ದಾರೆ. ಅಕ್ಷರ್ ಪಟೇಲ್ ಮತ್ತು ಕುಲದೀಪ್ ಯಾದವ್ ಕ್ರಮವಾಗಿ 7 ಮತ್ತು 8ನೇ ಸ್ಥಾನದಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT