ರಾಜ್ಕೋಟ್: ವಿಜಯ್ ಹಜಾರೆ ಟ್ರೋಫಿಯಲ್ಲಿ ಭಾರತ ಕ್ರಿಕೆಟ್ ತಂಡದ ಅನುಭವಿ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಅವರು ಸ್ಫೋಟಕ ಶತಕ ಸಿಡಿಸುವ ಮೂಲಕ ಮಿಂಚಿದ್ದಾರೆ. ರಾಜ್ಕೋಟ್ನ ನಿರಂಜನ್ ಶಾ ಮೈದಾನದಲ್ಲಿ ವಿದರ್ಭ ಹಾಗೂ ಬರೋಡಾ ತಂಡಗಳು ಮುಖಾಮುಖಿಯಾಗಿದ್ದವು.

ಈ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಅವರು ಮೊದಲ 62 ಎಸೆತಗಳಲ್ಲಿ 66 ರನ್ ಸಿಡಿಸಿದ್ದರು. ಆದರೆ, 39 ಓವರ್ನಲ್ಲಿ ವಿದರ್ಭ ತಂಡದ ಸ್ಪಿನ್ನರ್ ಪಾರ್ಥ್ ರೇಖಾಡೆ ಅವರ ಬೌಲಿಂಗ್ನ ಒಂದೇ ಓವರ್ನಲ್ಲಿ 5 ಸಿಕ್ಸರ್ ಹಾಗೂ 1 ಬೌಂಡರಿ ಗಳಿಸುವ ಮೂಲಕ 68 ಎಸೆತಗಳಲ್ಲಿ ಶತಕ ಪೂರೈಸಿದರು.

ಟಾಸ್ ಸೋತು ಮೊದಲು ಬ್ಯಾಟಿಂಗ್ ಆರಂಭಿಸಿದ ಬರೋಡ ತಂಡ 71 ರನ್ಗಳಿಗೆ 5 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿತ್ತು. ಆ ಸಂದರ್ಭದಲ್ಲಿ ಬ್ಯಾಟಿಂಗ್ ಇಳಿದ ಹಾರ್ದಿಕ್ ಪಾಂಡ್ಯ, 68 ಎಸೆತಗಳಲ್ಲಿ ಸಿಡಿಲಬ್ಬರದ ಸೆಂಚುರಿ ಸಿಡಿಸಿ ಮಿಂಚಿದರು. ಶತಕದ ಬಳಿಕವೂ ಅಬ್ಬರಿಸಿದ ಅವರು 133 ರನ್ ಗಳಿಸಿ ಔಟ್ ಆದರು.
.1000 ರನ್, 100 ವಿಕೆಟ್; ಚುಟುಕು ಕ್ರಿಕೆಟ್ನಲ್ಲಿ ದಾಖಲೆ ಬರೆದ ಹಾರ್ದಿಕ್ ಪಾಂಡ್ಯ.ಹಾರ್ದಿಕ್ ಗೆಳತಿಯ ಕೆಟ್ಟದಾಗಿ ತೋರಿಸುವ ಯತ್ನ: ಪಾಪರಾಜಿಗಳ ವಿರುದ್ಧ ಪಾಂಡ್ಯ ಕಿಡಿ.
ಶತಕದ ಬಳಿಕವೂ ಸ್ಫೋಟಕ ಬ್ಯಾಟಿಂಗ್ ನಡೆಸಿದ ಹಾರ್ದಿಕ್ ಪಾಂಡ್ಯ ಅವರು 92 ಎಸೆತಗಳಲ್ಲಿ 11 ಸಿಕ್ಸರ್ ಹಾಗೂ 8 ಬೌಂಡರಿಗಳ ನೆರವಿನಿಂದ 133 ರನ್ ಕಲೆಹಾಕಿದರು.

ಹಾರ್ದಿಕ್ ಪಾಂಡ್ಯ ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಬರೋಡಾ ತಂಡ ನಿಗದಿತ 50 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 293 ರನ್ ಕಲೆಹಾಕಿತು. ಆ ಮೂಲಕ ವಿದರ್ಭ ತಂಡಕ್ಕೆ 294 ರನ್ಗಳ ಗುರಿ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.