ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತ ತಂಡದ ಪೂರ್ಣಾವಧಿ ನಾಯಕತ್ವ ವಹಿಸಿಕೊಳ್ಳಲು ಸಿದ್ಧ: ಹಾರ್ದಿಕ್ ಪಾಂಡ್ಯ

Last Updated 8 ಆಗಸ್ಟ್ 2022, 10:51 IST
ಅಕ್ಷರ ಗಾತ್ರ

ಫ್ಲಾರಿಡಾ: ಪೂರ್ಣಾವಧಿಗೆ ಭಾರತ ಕ್ರಿಕೆಟ್ ತಂಡದ ನಾಯಕತ್ವ ವಹಿಸಲು ಸಿದ್ಧ ಎಂದು ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಹೇಳಿದ್ದಾರೆ.

ವೆಸ್ಟ್ ಇಂಡೀಸ್ ವಿರುದ್ಧದ ಐದನೇ ಟಿ20 ಕ್ರಿಕೆಟ್ ಪಂದ್ಯದಲ್ಲಿ ಭಾರತ ತಂಡವು 88 ರನ್‌ಗಳ ಜಯ ಸಾಧಿಸಿದ ಬಳಿಕ ಅವರು ಈ ಹೇಳಿಕೆ ನೀಡಿದ್ದಾರೆ.

ಭಾನುವಾರ ರಾತ್ರಿ ನಡೆದ ಪಂದ್ಯದಲ್ಲಿ ನಾಯಕ ರೋಹಿತ್‌ ಶರ್ಮಾ ಅನುಪಸ್ಥಿತಿಯಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಭರ್ಜರಿ ಗೆಲುವು ದಾಖಲಿಸುವ ಮೂಲಕ ಭಾರತ ತಂಡವು ಸರಣಿಯನ್ನು 4–1 ಅಂತರದಿಂದ ಗೆದ್ದುಕೊಂಡಿದೆ.

ಭಾರತ ತಂಡದ ನಾಯಕನಾಗುವುದು ವಿಶೇಷ ಅನುಭವ ನೀಡುತ್ತದೆ ಎಂದು ಪಾಂಡ್ಯ ಹೇಳಿದ್ದಾರೆ. ಇದೇ ವೇಳೆ, ಭವಿಷ್ಯದಲ್ಲಿ ತಂಡದ ನಾಯಕತ್ವದ ಜವಾಬ್ದಾರಿ ವಹಿಸಲು ಉತ್ಸುಕರಾಗಿದ್ದೀರಾ ಎಂಬ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಅವರು, ಖಂಡಿತವಾಗಿಯೂ ಸಿದ್ಧನಿದ್ದೇನೆ ಎಂದು ಉತ್ತರಿಸಿದ್ದಾರೆ.

‘ಅವಕಾಶ ನೀಡಿದರೆ, ಅದನ್ನು ಸಂತಸದಿಂದ ನಿರ್ವಹಿಸಬಲ್ಲೆ. ಆದರೆ ಸದ್ಯಕ್ಕೆ ವಿಶ್ವಕಪ್ ಸಮೀಪಿಸುತ್ತಿದ್ದು, ಅದಕ್ಕೆ ತಂಡವನ್ನು ಉತ್ತಮವಾಗಿ ಸಿದ್ಧಪಡಿಸಿಕೊಳ್ಳಬೇಕಿದೆ’ ಎಂದು ಪಾಂಡ್ಯ ಹೇಳಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಟೂರ್ನಿಯಲ್ಲಿ ಗುಜರಾತ್ ಟೈಟನ್ಸ್ ನಾಯಕತ್ವ ವಹಿಸಿದ ಅನುಭವ ಪಾಂಡ್ಯ ಅವರಿಗಿದೆ. ಜೂನ್‌ನಲ್ಲಿ ಐರ್ಲೆಂಡ್ ವಿರುದ್ಧ ನಡೆದಿದ್ದ ಟಿ20 ಸರಣಿಯಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದಾರೆ.

ಭಾರತವು ಕಳೆದ ಒಂದು ವರ್ಷದಿಂದ ಮೂರು ಮಾದರಿಯ ಕ್ರಿಕೆಟ್‌ನಲ್ಲಿ ಏಳು ಮಂದಿಗೆ ನಾಯಕತ್ವದ ಜವಾಬ್ದಾರಿ ವಹಿಸಿತ್ತು. ಇದರಿಂದ ತಂಡಕ್ಕೆ ಉತ್ತೇಜನ ದೊರೆಯಲಿದೆ ಎಂದು ರೋಹಿತ್ ಶರ್ಮಾ ಹೇಳಿದ್ದಾರೆ.

‘ತಂಡದ ಸುತ್ತಲೂ ಹಲವು ನಾಯಕರನ್ನು ರೂಪಿಸುವುದು ಉತ್ತೇಜನಕಾರಿ. ಆಟವನ್ನು ಚೆನ್ನಾಗಿ ಅರ್ಥ ಮಾಡಿಕೊಳ್ಳಬಲ್ಲ ಹಾಗೂ ತಂಡದೊಳಗೆ ಒಬ್ಬರನ್ನೊಬ್ಬರು ಚೆನ್ನಾಗಿ ತಿಳಿದಿರುವ ಹುಡುಗರು ಒತ್ತಡವನ್ನು ನಿಭಾಯಿಸಬೇಕು ಎಂದು ನೀವು ಬಯಸುವುದು ಸಹಜ’ ಎಂದು ರೋಹಿತ್ ಶರ್ಮಾ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT