ಮುಂಬೈ: ಇಲ್ಲಿನ ವಾಂಖೆಡೆ ಕ್ರಿಕೆಟ್ ಮೈದಾನದಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ನ 24ನೇ ಪಂದ್ಯದಲ್ಲಿ ಬಲಿಷ್ಠ ಮುಂಬೈ ಇಂಡಿಯನ್ಸ್ ತಂಡವು ಪಂಜಾಬ್ ಕಿಂಗ್ಸ್ ವಿರುದ್ಧ ಹೀನಾಯ ಪ್ರದರ್ಶನ ನೀಡುವ ಮೂಲಕ 4ನೇ ಸೋಲು ಅನುಭವಿಸಿತು. ಮಾತ್ರವಲ್ಲ, ಅಂಕಪಟ್ಟಿಯಲ್ಲಿ 9ನೇ ಸ್ಥಾನಕ್ಕೆ ಕುಸಿದಿದೆ.

ಪಂದ್ಯದ ಬಳಿಕ ಮಾತನಾಡಿದ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ, ತಂಡದ ಪ್ರದರ್ಶನ ಕುರಿತು ಬೇಸರ ವ್ಯಕ್ತಪಡಿಸಿದ್ದಾರೆ. ಮಾತ್ರವಲ್ಲ, ಮುಂದಿನ ಪಂದ್ಯಗಳಿಗೆ ಕೆಲವು ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳುವ ಸುಳಿವು ಕೂಡ ನೀಡಿದ್ದಾರೆ.

ಸತತ ನಾಲ್ಕು ಪಂದ್ಯಗಳಲ್ಲಿ ಬೆಂಚ್ ಕಾದಿದ್ದ ಕ್ವಿಂಟನ್ ಡಿ ಕಾಕ್ ನಿನ್ನೆಯ (ಏಪ್ರಿಲ್ 16) ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದು, 60 ಎಸೆತಗಳಲ್ಲಿ ಅಜೇಯ 112 ರನ್ ಕಲೆಹಾಕಿದರು. ಅವರ ಅಮೋಘ ಬ್ಯಾಟಿಂಗ್ ನೆರವಿನಿಂದ ಮುಂಬೈ ತಂಡವು ನಿಗದಿತ 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 195 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಪಂಜಾಬ್ ಕಿಂಗ್ಸ್ 16.3 ಓವರ್ಗಳಲ್ಲಿ ಗುರಿ ತಲುಪಿತು.

ಪಂಜಾಬ್ ಪರ ಅತ್ಯುತ್ತಮ ಪ್ರದರ್ಶನ ನೀಡಿದ ಆರಂಭಿಕ ಬ್ಯಾಟರ್ ಪ್ರಭ್ಸಿಮ್ರಾನ್ ಸಿಂಗ್ 39 ಎಸೆತಗಳಲ್ಲಿ ಅಜೇಯ 80 ರನ್ ಗಳಿಸಿದರು. ಇವರ ಜೊತೆ ನಾಯಕ ಶ್ರೇಯಸ್ ಅಯ್ಯರ್ 35 ಎಸೆತಗಳಲ್ಲಿ 66 ರನ್ ಗಳಿಸುವ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಿದರು. ಆ ಮೂಲಕ ಪಂಜಾಬ್ ತಂಡವು ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿತು.

ಪಂದ್ಯದ ಸೋಲಿನ ಕುರಿತು ಮಾತನಾಡಿದ ಹಾರ್ದಿಕ್ ಪಾಂಡ್ಯ, ‘ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಈಗ ನನಗೆ ಹೇಳಲು ಏನೂ ಉಳಿದಿಲ್ಲ. ನಾವು ಏನು ತಪ್ಪು ಮಾಡುತ್ತಿದ್ದೇವೆ ಎಂಬುದನ್ನು ಪರಾಮರ್ಶಿಸಿ ನೋಡಬೇಕು. ನಮ್ಮಲ್ಲಿ ಏನು ಸಮಸ್ಯೆ ಇದೆ ಎಂಬುದನ್ನು ಮೊದಲು ಪತ್ತೆ ಹಚ್ಚಬೇಕು. ಅದು ವ್ಯಕ್ತಿಗಳದ್ದೋ? ಅಥವಾ ಒಂದು ಗುಂಪಿನದ್ದೋ? ಎಂಬುದನ್ನು ತಿಳಿದುಕೊಳ್ಳಬೇಕು. ಮುಂದಿನ ಪಂದ್ಯಗಳಲ್ಲಿ ಏನು ಮಾಡಬೇಕು ಎಂಬುದನ್ನು ಯೋಚಿಸುತ್ತೇವೆ’ ಎಂದಿದ್ದಾರೆ.
.PHOTOS | ಮುಂಬೈ ಇಂಡಿಯನ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ಗೆ ಗೆಲುವು.
ಮುಂದುವರೆದು ಮಾತನಾಡಿದ ಅವರು, ‘ನಾವು ಕೆಲವು ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾ? ಅಥವಾ ಆಗಿರುವ ತಪ್ಪುಗಳನ್ನು ಸರಿಪಡಿಸಬೇಕಾ? ಎಂಬುದನ್ನು ಯೋಚಿಸುತ್ತೇವೆ. ಇಲ್ಲಿ ಸೋಲಿನ ಹೊಣೆಯನ್ನು ಪ್ರತಿಯೊಬ್ಬರು ತೆಗೆದುಕೊಳ್ಳಬೇಕಾಗುತ್ತದೆ’ ಎನ್ನುವ ಮೂಲಕ ಮುಂದಿನ ಪಂದ್ಯಗಳಲ್ಲಿ ತಂಡದಲ್ಲಿ ಬದಲಾವಣೆ ಮಾಡುವ ಸೂಚನೆ ನೀಡಿದರು.

ಇನ್ನೂ ಪಂಜಾಬ್ ಪ್ರದರ್ಶನದ ಕುರಿತು ಮಾತನಾಡಿದ ಪಾಂಡ್ಯ, ‘ಅವರು ನಮಗಿಂತಲೂ ಉತ್ತಮವಾಗಿ ಆಡಿದರು. ಬ್ಯಾಟಿಂಗ್, ಬೌಲಿಂಗ್ ಹಾಗೂ ಕ್ಷೇತ್ರ ರಕ್ಷಣೆ ಎಲ್ಲಾ ವಿಭಾಗದಲ್ಲೂ ಉತ್ತಮ ಪ್ರದರ್ಶನ ನೀಡಿದರು. ಎರಡನೇ ಇನಿಂಗ್ಸ್ನಲ್ಲಿ ಇಬ್ಬನಿ ಇತ್ತು. ಆದರೆ, ಅದೇ ಗೆಲುವಿಗೆ ಕಾರಣ ಎನ್ನಲಾಗದು. ಅವರು ನಮಗಿಂತ ಉತ್ತಮವಾಗಿ ಆಡಿದರು’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.