ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಮೈದಾನದ ಒಳಗೂ ಹಾಗೂ ಹೊರಗು ಸದಾ ಸುದ್ದಿಯಲ್ಲಿರುವ ಆಟಗಾರ. ಅವರು ಪತ್ನಿ ನತಾಶಾ ಸ್ಟಾಂಕೋವಿಕ್ರಿಂದ ವಿಚ್ಛೇದನ ಪಡೆದ ನಂತರ, ಅನೇಕ ಮಾಡೆಲ್ಗಳ ಜೊತೆಗೆ ಅವರ ಹೆಸರು ತಳುಕು ಹಾಕಿಕೊಳ್ಳತ್ತಿದೆ.

ಕಳೆದ ಕೆಲ ದಿನಗಳ ಹಿಂದೆ ಬ್ರಿಟಿಷ್ ಮಾಡೆಲ್ ಜಾಸ್ಮಿನ್ ವಾಲಿಯಾ ಜೊತೆ ಪಾಂಡ್ಯ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಇದೀಗ ಇನ್ನೋರ್ವ ಮಾಡೆಲ್ ಹಾಗೂ ನಟಿ ಜೊತೆ ಹಾರ್ದಿಕ್ ಪಾಂಡ್ಯ ಏರ್ಪೋರ್ಟ್ನಲ್ಲಿ ಕಾಣಿಸಿಕೊಂಡಿದ್ದಾರೆ. ಅವರು ಬೇರೆ ಯಾರು ಅಲ್ಲ ಬಾಲಿವುಡ್ನ ಮಿಸ್ಟರ್ ಜೋ. ಬಿ ಸಿನಿಮಾದಲ್ಲಿ ನಟಿಸಿದ್ದ ಮಹಿಕಾ ಶರ್ಮಾ.

ಅಕ್ಟೋಬರ್ 10 ರಂದು ಹಾರ್ದಿಕ್ ಪಾಂಡ್ಯ ನಟಿ ಮಹಿಕಾ ಶರ್ಮಾ ಜೊತೆ ಕಾಣಿಸಿಕೊಂಡಿದ್ದಾರೆ. ಈ ಜೋಡಿ ಒಟ್ಟಿಗೆ ಕಾಣಿಸಿಕೊಳ್ಳುವ ಮೂಲಕ ಅಭಿಮಾನಿಗಳ ಗಮನ ಸೆಳೆದಿದ್ದು, ಸಾಮಾಜಿಕ ಮಾಧ್ಯಮದಲ್ಲಿ ವಿವಿಧ ರೀತಿಯ ಕಾಮೆಂಟ್ ಮಾಡುತ್ತಿದ್ದಾರೆ. ಇಬ್ಬರು ಒಟ್ಟಿಗೆ ಕಾಣಿಸಿಕೊಂಡಿರುವುದು ಇಬ್ಬರ ನಡುವಿನ ಸಂಬಂಧದ ವದಂತಿಗೆ ಮತ್ತಷ್ಟು ಬಲ ನೀಡಿದೆ.

ಇನ್ನೂ, ಇಬ್ಬರ ಸಂಬಂಧದ ನಡುವೆ ಹಾರ್ದಿಕ್ ಪಾಂಡ್ಯ ಮತ್ತು ಮಹಿಕಾ ಶರ್ಮಾ ಯಾವುದೇ ಅಧಿಕೃತ ಪ್ರತಿಕ್ರಿಯೆ ನೀಡಿಲ್ಲ. ಆದರೆ ಇನ್ಸ್ಟಾಗ್ರಾಮ್ನಲ್ಲಿ ಪರಸ್ಪರ ಇಬ್ಬರೂ ಫಾಲೋ ಮಾಡುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.