ಧರ್ಮಶಾಲಾ: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 3ನೇ ಟಿ–20 ಪಂದ್ಯದಲ್ಲಿ ಟ್ರಿಸ್ಟನ್ ಸ್ಟಬ್ಸ್ ವಿಕೆಟ್ ಪಡೆಯುವ ಮೂಲಕ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಟಿ20 ಕ್ರಿಕೆಟ್ನಲ್ಲಿ ಹೊಸ ಮೈಲಿಗಲ್ಲು ತಲುಪಿದ್ದಾರೆ.

ಟೀಂ ಇಂಡಿಯಾ ಪರ ಚುಟುಕು ಕ್ರಿಕೆಟ್ನಲ್ಲಿ 1000 ರನ್ ಹಾಗೂ 100 ವಿಕೆಟ್ ಪಡೆದ ಏಕೈಕ ಆಟಗಾರ ಎನ್ನುವ ಖ್ಯಾತಿಗೆ ಹಾರ್ದಿಕ್ ಪಾಂಡ್ಯ ಪಾತ್ರರಾಗಿದ್ದಾರೆ.

ಅಂತರರಾಷ್ಟ್ರೀಯ ಕ್ರಿಕೆಟ್ನಲ್ಲಿ 1,939 ರನ್ ಗಳಿಸಿರುವ ಪಾಂಡ್ಯ, ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಒಂದು ವಿಕೆಟ್ ಪಡೆಯುವ ಮೂಲಕ ಟಿ–20ಯಲ್ಲಿ 100 ವಿಕೆಟ್ ಪಡೆದ ಸಾಧನೆ ಮಾಡಿದರು.

ಟಿ–20 ಕ್ರಿಕೆಟ್ನಲ್ಲಿ ಒಟ್ಟು 5 ಆಟಗಾರರು ಈ ದಾಖಲೆ ಬರೆದಿದ್ದು, ಚುಟುಕು ಕ್ರಿಕೆಟ್ ಇತಿಹಾಸದಲ್ಲೇ ಈ ಸಾಧನೆ ಮಾಡಿದ ಮೊದಲ ವೇಗದ ಬೌಲಿಂಗ್ ಆಲ್ರೌಂಡರ್ ಎನ್ನುವ ದಾಖಲೆಗೆ ಪಾಂಡ್ಯ ಭಾಜನರಾಗಿದ್ದಾರೆ.

ಹಾರ್ದಿಕ್ ಪಾಂಡ್ಯ ಅವರು ಭಾರತದ ಪರ ಟಿ–20 ಕ್ರಿಕೆಟ್ನಲ್ಲಿ 100 ವಿಕೆಟ್ ಪಡೆದ ಮೂರನೇ ಆಟಗಾರರಾಗಿದ್ದಾರೆ. ಪಾಂಡ್ಯಗೂ ಮುನ್ನ ಆರ್ಷದೀಪ್ ಸಿಂಗ್ ಹಾಗೂ ಜಸ್ಪ್ರೀತ್ ಬೂಮ್ರಾ ಈ ಸಾಧನೆ ಮಾಡಿದ್ದರು.

ಟೀಂ ಇಂಡಿಯಾ ಪರ ಟೆಸ್ಟ್ ಹಾಗೂ ಏಕದಿನ ಕ್ರಿಕೆಟ್ನಲ್ಲಿ 10 ಆಟಗಾರರು 1000 ರನ್ ಹಾಗೂ 100 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ.
.IPL 2026 Auction: ಐಪಿಎಲ್ ಮಿನಿ ಹರಾಜನ್ನು ಇಲ್ಲಿ ವೀಕ್ಷಿಸಬಹುದು.ಐಪಿಎಲ್ ವೇಳೆಯೇ ಪಿಎಸ್ಎಲ್ ಟೂರ್ನಿ ಆಯೋಜನೆ: ದಿನಾಂಕ ಘೋಷಿಸಿದ ನಖ್ವಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.