ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏಕದಿನ ರ‍್ಯಾಂಕಿಂಗ್‌ನಲ್ಲಿ ಹರ್ಮನ್‌ಪ್ರೀತ್‌, ಮಂದಾನಾಗೆ ಬಡ್ತಿ

Last Updated 12 ಜುಲೈ 2022, 11:16 IST
ಅಕ್ಷರ ಗಾತ್ರ

ದುಬೈ: ಭಾರತ ಮಹಿಳಾ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಮತ್ತ ಉಪನಾಯಕಿ ಸ್ಮೃತಿ ಮಂದಾನ ಅವರು ಐಸಿಸಿ ಏಕದಿನ ಕ್ರಿಕೆಟ್‌ ಬ್ಯಾಟರ್‌ಗಳ ರ‍್ಯಾಂಕಿಂಗ್‌ನಲ್ಲಿ ಏರಿಕೆ ದಾಖಲಿಸಿದ್ದಾರೆ.

ಮಂಗಳವಾರ ಪ್ರಕಟವಾದ ರ‍್ಯಾಂಕಿಂಗ್‌ನಲ್ಲಿ ಹರ್ಮನ್‌ಪ್ರೀತ್‌ ಒಂದು ಸ್ಥಾನ ಪ್ರಗತಿ ಸಾಧಿಸಿ 13ನೇ ಸ್ಥಾನಕ್ಕೇರಿದ್ದರೆ, ಸ್ಮೃತಿ ಒಂಬತ್ತನೇ ಸ್ಥಾನ ತಲುಪಿದ್ದಾರೆ. ಇತ್ತೀಚೆಗೆ ನಡೆದ ಶ್ರೀಲಂಕಾ ಎದುರಿನ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಹರ್ಮನ್‌ಪ್ರೀತ್‌ 59.50ರ ಸರಾಸರಿಯಲ್ಲಿ 119 ರನ್ ಗಳಿಸಿದ್ದರು. ಸರಣಿ ಶ್ರೇಷ್ಠ ಗೌರವವೂ ಅವರಿಗೆ ಒಲಿದಿತ್ತು. ಭಾರತ ಸರಣಿಯನ್ನು 3–0ಯಿಂದ ಕ್ಲೀನ್‌ಸ್ವೀಪ್ ಮಾಡಿತ್ತು.

ಸ್ಮೃತಿ ಕೂಡ 52ರ ಸರಾಸರಿಯಲ್ಲಿ 104 ರನ್ ಕಲೆಹಾಕಿದ್ದರು. ಶಫಾಲಿ ವರ್ಮಾ 33ಕ್ಕೆ ಸ್ಥಾನಕ್ಕೆ, ಯಷ್ಟಿಕಾ ಭಾಟಿಯಾ 45ನೇ ಸ್ಥಾನಕ್ಕೇರಿದ್ದರೆ, ಆಲ್‌ರೌಂಡರ್‌ ವಿಭಾಗದಲ್ಲಿ ಪೂಜಾ ವಸ್ತ್ರಕರ್‌ 53ನೇ ಸ್ಥಾನ ತಲುಪಿದ್ದಾರೆ.

ಬೌಲರ್‌ಗಳ ವಿಭಾಗದಲ್ಲಿ ಸ್ಪಿನ್ನರ್ ರಾಜೇಶ್ವರಿ ಗಾಯಕವಾಡ ಜಂಟಿ ಒಂಬತ್ತನೇ ಸ್ಥಾನದಲ್ಲಿದ್ದಾರೆ. ಮೇಘನಾ ಸಿಂಗ್‌ (43ನೇ ಸ್ಥಾನ) ಮತ್ತು ಪೂಜಾ ವಸ್ತ್ರಕರ್‌ (ಜಂಟಿ 48ನೇ ಸ್ಥಾನ) ಕೂಡ ಪ್ರಗತಿ ಸಾಧಿಸಿದ್ದಾರೆ. ಈ ವಿಭಾಗದಲ್ಲಿ ಜೂಲನ್ ಗೋಸ್ವಾಮಿ ಆರನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಲಂಕಾ ಎದುರಿನ ಸರಣಿಯಲ್ಲಿ ಅವರು ಆಡಿರಲಿಲ್ಲ.

ಬ್ಯಾಟರ್‌ಗಳಲ್ಲಿ ಆಸ್ಟ್ರೇಲಿಯಾದ ಅಲಿಸಾ ಹೀಲಿ ಮತ್ತು ಇಂಗ್ಲೆಂಡ್‌ನ ನತಾಲಿ ಸೀವರ್ ಕ್ರಮವಾಗಿ ಮೊದಲ ಮತ್ತು ಎರಡನೇ ಸ್ಥಾನಗಳಲ್ಲಿದ್ದರೆ, ಇಂಗ್ಲೆಂಡ್‌ನ ಸೋಫಿ ಎಕ್ಲೆಸ್ಟೋನ್‌ ಮತ್ತು ದಕ್ಷಿಣ ಆಫ್ರಿಕಾದ ಶಬ್ನಿಮ್ ಇಸ್ಮಾಯಿಲ್ ಬೌಲರ್‌ಗಳ ವಿಭಾಗದಲ್ಲಿ ಮೊದಲೆರಡು ಸ್ಥಾನ ಪಡೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT