ಶುಕ್ರವಾರ, ಡಿಸೆಂಬರ್ 2, 2022
21 °C

ರ್‍ಯಾಂಕಿಂಗ್‌: ಹರ್ಮನ್‌ಗೆ 5ನೇ ಸ್ಥಾನ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ದುಬೈ: ಭಾರತ ತಂಡದ ನಾಯಕಿ ಹರ್ಮನ್‌ಪ್ರೀತ್‌ ಕೌರ್‌ ಅವರು ಐಸಿಸಿ ಮಹಿಳಾ ಏಕದಿನ ಕ್ರಿಕೆಟ್‌ ರ‍್ಯಾಂಕಿಂಗ್‌ನಲ್ಲಿ ಬ್ಯಾಟರ್‌ಗಳ ಪಟ್ಟಿಯಲ್ಲಿ ನಾಲ್ಕು ಕ್ರಮಾಂಕ ಮೇಲಕ್ಕೇರಿ, ಐದನೇ ಸ್ಥಾನ ಗಳಿಸಿದ್ದಾರೆ.

ಇಂಗ್ಲೆಂಡ್‌ ಎದುರಿನ ಸರಣಿಯನ್ನು 3–0 ರಲ್ಲಿ ಗೆದ್ದುಕೊಂಡ ಭಾರತ ತಂಡದಲ್ಲಿದ್ದ ಹಲವರು ರ‍್ಯಾಂಕಿಂಗ್‌ನಲ್ಲಿ ಮೇಲಕ್ಕೇರಿದ್ದಾರೆ. ಎರಡನೇ ಏಕದಿನ ಪಂದ್ಯದಲ್ಲಿ ಕೌರ್‌ ಅವರು 111 ಎಸೆತಗಳಲ್ಲಿ 143 ರನ್‌ ಗಳಿಸಿದ್ದರು.

ಬ್ಯಾಟರ್‌ಗಳ ಪಟ್ಟಿಯಲ್ಲಿ ಸ್ಮೃತಿ ಮಂದಾನ ಮತ್ತು ದೀಪ್ತಿ ಶರ್ಮಾ ಅವರು ಕ್ರಮವಾಗಿ ಆರು ಹಾಗೂ 24ನೇ ಸ್ಥಾನದಲ್ಲಿದ್ದಾರೆ. ಇವರಿಬ್ಬರು ಕ್ರಮವಾಗಿ ಒಂದು ಹಾಗೂ ಎಂಟು ಸ್ಥಾನಗಳಷ್ಟು ಮೇಲಕ್ಕೇರಿದ್ದಾರೆ.

ಬೌಲರ್‌ಗಳ ಪಟ್ಟಿಯಲ್ಲಿ ರೇಣುಕಾ ಸಿಂಗ್‌, 35 ಕ್ರಮಾಂಕ ಮುಂಬಡ್ತಿ ಪಡೆದು 35ನೇ ಸ್ಥಾನ ಹೊಂದಿದ್ದಾರೆ. ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ವಿರಮಿಸಿರುವ ವೇಗದ ಬೌಲರ್‌ ಜೂಲನ್‌ ಗೋಸ್ವಾಮಿ ಅವರು ಐದನೇ ಸ್ಥಾನದಲ್ಲಿದ್ದಾರೆ.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು