ಮುಂಬೈ: ವಿಶ್ವಕಪ್ ಆರಂಭಕ್ಕೆ ಒಂದು ದಿನ ಮಾತ್ರ ಬಾಕಿ ಉಳಿದಿದ್ದು, ಭಾರತ ತಂಡದ ವೇಗಿ ಹರ್ಷಿತ್ ರಾಣಾ ಗಾಯಗೊಂಡು ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಬದಲಿಗೆ ಇನ್ನೋರ್ವ ವೇಗಿ ಮೊಹಮ್ಮದ್ ಸಿರಾಜ್ ಅವರಿಗೆ ಅವಕಾಶ ನೀಡಲಾಗಿದೆ.

ಬುಧವಾರ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಅಭ್ಯಾಸ ಪಂದ್ಯದ ಸಂದರ್ಭದಲ್ಲಿ ಮೊಣಕಾಲಿನ ಗಾಯಕ್ಕೆ ಒಳಗಾಗಿ ತಂಡದಿಂದ ಹೊರಬಿದ್ದಿರುವ ಹರ್ಷಿತ್ ರಾಣಾ ಬದಲು ಮೊಹಮ್ಮದ್ ಸಿರಾಜ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ ಎಂದು ಬಿಸಿಸಿಐ ಮೂಲಗಳು ಮಾಹಿತಿ ನೀಡಿವೆ.

ಇದಕ್ಕೂ ಮೊದಲು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ನಾಯಕ ಸೂರ್ಯಕುಮಾರ್ ಯಾದವ್, ‘ಹರ್ಷಿತ್ ರಾಣಾ ಅವರು ಸಂಪೂರ್ಣವಾಗಿ ಫಿಟ್ ಆಗಿಲ್ಲ. ಅವರು, ವೈದ್ಯರ ಮೇಲ್ವಿಚಾರಣೆಯಲ್ಲಿದ್ದಾರೆ. ಆದರೆ, ಅವರನ್ನು ತಂಡದಿಂದ ಸಂಪೂರ್ಣವಾಗಿ ಹೊರಗಿಟ್ಟಿಲ್ಲ’ ಎಂದು ತಿಳಿಸಿದ್ದರು.
.ವಿಶ್ವಕಪ್ ಆರಂಭಕ್ಕೂ ಮುನ್ನ ಭಾರತಕ್ಕೆ ಆಘಾತ: ತಾರಾ ವೇಗಿ ಗಾಯ, ತಂಡದಿಂದ ಹೊರಕ್ಕೆ.T20 World Cup 2026: ಕಣದಲ್ಲಿವೆ 20 ತಂಡಗಳು, ಯಾರು, ಯಾವ ಗುಂಪಿನಲ್ಲಿದ್ದಾರೆ?.
ಹರ್ಷಿತ್ ರಾಣಾಗೂ ಮೊದಲು, ಟಿ20 ವಿಶ್ವಕಪ್ಗೆ ಆಯ್ಕೆ ಮಾಡಲಾಗಿದ್ದ ಭಾರತ ತಂಡದಿಂದ ಆಲ್ರೌಂಡರ್ ವಾಷಿಂಗ್ಟನ್ ಸುಂದರ್ ಗಾಯದಿಂದ ಹೊರಗುಳಿದಿದ್ದಾರೆ.

‘ಕಳೆದ ಎರಡು ವರ್ಷಗಳಿಂದ ಅನೇಕ ವೇಗಿಗಳು ಭಾರತದ ಪರ ಅದ್ಭುತ ಪ್ರದರ್ಶನ ನೀಡಿದ್ದಾರೆ. ಆದರೆ, ಹರ್ಷಿತ್ ಬದಲು ಬೌಲಿಂಗ್ ಜೊತೆಗೆ ಬ್ಯಾಟಿಂಗ್ನಲ್ಲೂ ಪ್ರದರ್ಶನ ತೋರಬಲ್ಲ ವೇಗಿ ಯಾರಾದರೂ ಇದ್ದಾರ ಎಂದು ಹುಡುಕುತ್ತೇವೆ’ ಎಂದು ಸೂರ್ಯಕುಮಾರ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.