ಸೋಮವಾರ, ಜೂನ್ 1, 2020
27 °C

ಟಿ–20 ವಿಶ್ವಕಪ್ ಮುಂದೂಡಿದರೆ ಐಪಿಎಲ್‌ಗೆ ಅವಕಾಶ: ಅನ್ಷುಮನ್ ಗಾಯಕವಾಡ್

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಆಸ್ಟ್ರೇಲಿಯಾದಲ್ಲಿ ಇದೇ ಅಕ್ಟೋಬರ್ ಮತ್ತು ನವೆಂಬರ್‌ ತಿಂಗಳಲ್ಲಿ ಟಿ20 ವಿಶ್ವಕಪ್ ಟೂರ್ನಿಯು ಮುಂದೂಡಿಕೆಯಾಗುವ ಸಾಧ್ಯತೆ ಹೆಚ್ಚಿದೆ. ಹಾಗಾದರೆ, ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯನ್ನು ಆಯೋಜಿಸಲು ಅವಕಾಶ ಸಿಗಬಹುದು ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅ‍ಪೆಕ್ಸ್‌ ಕೌನ್ಸಿಲ್ ಸದಸ್ಯ ಅನ್ಷುಮನ್ ಗಾಯಕವಾಡ್ ತಿಳಿಸಿದ್ದಾರೆ.

ಕೊರೊನಾ ವೈರಸ್ ಸೋಂಕು ತಡೆಯಲು ದೇಶದಲ್ಲಿ ಲಾಕ್‌ಡೌನ್ ವಿಧಿಸಲಾಗಿದೆ. ಅದರಿಂದಾಗಿ ಮಾರ್ಚ್ ಕೊನೆಯ ವಾರದಲ್ಲಿ ಆರಂಭವಾಗಬೇಕಿದ್ದ ಐಪಿಎಲ್ ಟೂರ್ನಿಯನ್ನು ಅನಿರ್ದಿಷ್ಟಾವಧಿಯವರೆಗೆ ಮುಂದೂಡಲಾಗಿದೆ.

‘ಟಿ20 ವಿಶ್ವಕಪ್ ಟೂರ್ನಿಯು ಆಯೋಜನೆಗೊಳ್ಳುವುದು ಅನುಮಾನವಾಗಿದೆ. ಅಕ್ಟೋಬರ್ ಹೊತ್ತಿಗೆ ನಮ್ಮ ದೇಶದಲ್ಲಿ ಪರಿಸ್ಥಿತಿ ಸುಧಾರಣೆಯಾಗಿದ್ದರೆ ಐಪಿಎಲ್ ನಡೆಸಲು ಅವಕಾಶ ಸಿಗಬಹುದು. ಕೊರೊನಾ ಮಹಾಮಾರಿಯು ನಿಯಂತ್ರಣಕ್ಕೆ ಬರುವುದು ಮುಖ್ಯ. ಆಗ ಮಾತ್ರ ಯೋಜನೆ ರೂಪಿಸಲು ಸಾಧ್ಯವಾಗುತ್ತದೆ’ ಎಂದು ಹೇಳಿದ್ದಾರೆ.

‘ಭವಿಷ್ಯದಲ್ಲಿ ಕ್ರಿಕೆಟ್‌ ನಲ್ಲಿ ಹಲವು ಬದಲಾವಣೆಗಳಾಗುವುದು ಖಚಿತ.  ಪ್ರೇಕ್ಷಕರಿಲ್ಲದ ಕ್ರೀಡಾಂಗಣದಲ್ಲಿ ಆಡುವುದನ್ನು ಆಟಗಾರರು ರೂಢಿಸಿಕೊಳ್ಳಬೇಕಾಗಬಹುದು. ಇದಲ್ಲದೇ ಇನ್ನೂ ಕೆಲವು ಬದಲಾವಣೆಗಳನ್ನು ಸವಾಲುಗಳಂತೆ ಸ್ವೀಕರಿಸಿ ಯಶಸ್ವಿಯಾಗಬೇಕಿದೆ’ ಎಂದು ಅನ್ಷುಮನ್ ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು