ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಲ್ಕೂವರೆ ತಿಂಗಳಲ್ಲಿ 22 ಬಾರಿ ಕೋವಿಡ್‌ ಟೆಸ್ಟ್ ಮಾಡಿಸಿಕೊಂಡಿದ್ದೇನೆ: ಗಂಗೂಲಿ

Last Updated 24 ನವೆಂಬರ್ 2020, 13:38 IST
ಅಕ್ಷರ ಗಾತ್ರ

ಮುಂಬೈ: ವೃತ್ತಿಪರ ಬದ್ದತೆಗಳನ್ನು ಪೂರ್ಣಗೊಳಿಸುವ ಹಂತದಲ್ಲಿ ತಾನು ಕಳೆದ ನಾಲ್ಕೂವರೆ ತಿಂಗಳಲ್ಲಿ 22 ಬಾರಿ ಕೋವಿಡ್‌–19 ಪರೀಕ್ಷೆ ಮಾಡಿಸಿಕೊಂಡಿದ್ದೇನೆ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಅಧ್ಯಕ್ಷ ಸೌರವ್‌ ಗಂಗೂಲಿ ಮಂಗಳವಾರ ಬಹಿರಂಗಪಡಿಸಿದ್ದಾರೆ.

ಸೆಪ್ಟೆಂಬರ್‌ ಹಾಗೂ ನವೆಂಬರ್‌ ತಿಂಗಳಲ್ಲಿ ಗಂಗೂಲಿ ಅವರು ಯುನೈಟೆಡ್‌ ಅರಬ್ ಎಮಿರೇಟ್ಸ್‌ನಲ್ಲಿ ಐಪಿಎಲ್‌ ಟೂರ್ನಿ ಆಯೋಜಿಸುವಲ್ಲಿ ನಿರತರಾಗಿದ್ದರು.

‘ಕಳೆದ ನಾಲ್ಕೂವರೆ ತಿಂಗಳಲ್ಲಿ 22 ಬಾರಿ ಕೋವಿಡ್‌ ಪರೀಕ್ಷೆ ಮಾಡಿಸಿಕೊಂಡಿದ್ದು, ಒಂದು ಬಾರಿಯೂ ವರದಿ ಪಾಸಿಟಿವ್ ಬಂದಿಲ್ಲ. ನಾನಿರುವ ಪರಿಸರದ ಸುತ್ತ ಸೋಂಕು ಪ್ರಕರಣಗಳು ಕಂಡುಬಂದಿದ್ದವು. ಹೀಗಾಗಿ ಪರೀಕ್ಷೆಗೆ ಒಳಪಡಬೇಕಾಯಿತು‘ ಎಂದು ವರ್ಚುವಲ್‌ ಮಾಧ್ಯಮಗೋಷ್ಠಿಯೊಂದರಲ್ಲಿ ಗಂಗೂಲಿ ಹೇಳಿದ್ದಾರೆ.

‘ನಾನು ವಯಸ್ಸಾದ ತಂದೆ ತಾಯಿಯೊಂದಿಗೆ ವಾಸಿಸುತ್ತಿದ್ದೇನೆ. ದುಬೈ ಪ್ರವಾಸ ಮಾಡಿದ್ದೆ. ಮೊದ ಮೊದಲು ಈ ಕುರಿತು ಕಳವಳ ಇತ್ತು. ಕೇವಲ ನನಗಾಗಿ ಅಲ್ಲದೆ ಸಮುದಾಯದ ಬಗ್ಗೆ ಕೂಡ ಚಿಂತಿತನಾಗಿದ್ದೆ‘ ಎಂದು ಗಂಗೂಲಿ ನುಡಿದರು.

ಭಾರತ ತಂಡದ ಆಸ್ಟ್ರೇಲಿಯಾ ಪ್ರವಾಸದ ಕುರಿತು ಮಾತನಾಡಿದ ಅವರು ‘ನಮ್ಮ ಆಟಗಾರರು ಫಿಟ್‌ ಆಗಿದ್ದಾರೆ. ಆಸ್ಟ್ರೇಲಿಯಾದಲ್ಲೂ ಈಗ ಹೆಚ್ಚಿನ ಸೋಂಕು ಪ್ರಕರಣಗಳು ಇಲ್ಲ. ಅಲ್ಲಿಯ ಪ್ರಯಾಣ ನಿರ್ಬಂಧಗಳನ್ನು ಇನ್ನೂ ಸಡಿಲಗೊಳಿಸಿಲ್ಲ. 14 ದಿನಗಳ ಕ್ವಾರಂಟೈನ್ ಅವಧಿ ಪೂರ್ಣಗೊಳಿಸಿರುವ ಆಟಗಾರರು ಅಂಗಣಕ್ಕಿಳಿಯಲು ಸಜ್ಜಾಗಿದ್ದಾರೆ‘ ಎಂದರು.

ಭಾರತ ತಂಡದ ಆಟಗಾರರು ಮಂಗಳವಾರ 14 ದಿನಗಳ ಪ್ರತ್ಯೇಕವಾಸದ ಅವಧಿ ಪೂರ್ಣಗೊಳಿಸಿದ್ದಾರೆ. ಇದೇ 27ರಿಂದ ಸಿಡ್ನಿಯಲ್ಲಿ ಉಭಯ ತಂಡಗಳ ನಡುವೆ ಮೊದಲ ಏಕದಿನ ಪಂದ್ಯ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT