ದುಬೈ: ಕೋವಿಡ್ನಿಂದ ಚೇತರಿಸಿಕೊಂಡಿರುವ ಮುಖ್ಯ ಕೋಚ್ ರಾಹುಲ್ ದ್ರಾವಿಡ್, ಭಾರತ ತಂಡವನ್ನು ಸೇರಲು ಸಜ್ಜಾಗಿದ್ದಾರೆ.

ದುಬೈನಲ್ಲಿ ನಡೆಯುತ್ತಿರುವ ಏಷ್ಯಾ ಕಪ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಭಾನುವಾರ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೂ ಮುನ್ನ ದ್ರಾವಿಡ್, ತಂಡವನ್ನು ಸೇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ:Asia Cup 2022: ಮರಳುನಾಡಿನಲ್ಲಿ ಭಾರತ–ಪಾಕ್ ಹಣಾಹಣಿ

ಆಗಸ್ಟ್ 23ರಂದು ನಡೆಸಿದ್ದ ಕೋವಿಡ್ ಪರೀಕ್ಷೆಯಲ್ಲಿ ರಾಹುಲ್ ದ್ರಾವಿಡ್ ಅವರಲ್ಲಿ ಕೊರೊನಾ ಸೋಂಕು ದೃಢಪಟ್ಟಿತ್ತು. ಅಲ್ಲದೆ ತಂಡದ ಜೊತೆಗೆ ದುಬೈಗೆ ಪ್ರಯಾಣ ಬೆಳೆಸಿರಲಿಲ್ಲ.

ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಮುಖ್ಯಸ್ಥ ವಿವಿಎಸ್ ಲಕ್ಷ್ಮಣ್ ಅವರನ್ನು ಏಷ್ಯಾ ಕಪ್ಗಾಗಿ ಭಾರತ ತಂಡದ ಹಂಗಾಮಿ ಮುಖ್ಯ ಕೋಚ್ ಆಗಿ ನೇಮಕ ಮಾಡಲಾಗಿತ್ತು.

ಈಗ ನಡೆಸಿದ ಕೋವಿಡ್ ಪರೀಕ್ಷೆಯಲ್ಲಿ ದ್ರಾವಿಡ್ ಅವರ ಪರೀಕ್ಷಾ ವರದಿಯು ನೆಗೆಟಿವ್ ಬಂದಿದ್ದು, ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ.

ಇದನ್ನೂ ಓದಿ:Asia Cup 2022: ಸೂಪರ್ ಸಂಡೇ; ಭಾರತ vs ಪಾಕಿಸ್ತಾನ ಹೈವೋಲ್ಟೇಜ್ ಪಂದ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.