ಮಂಗಳವಾರ, ನವೆಂಬರ್ 24, 2020
26 °C

ಕಪಿಲ್ ದೇವ್‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಕಪಿಲ್ ದೇವ್ ಶುಕ್ರವಾರ ತೀವ್ರ ಹೃದಯಾಘಾತದಿಂದ ನವದೆಹಲಿಯಲ್ಲಿರುವ ಆಸ್ಪತ್ರೆಗೆ ದಾಖಲಾಗಿದ್ದಾರೆ.

ತೀವ್ರ ಎದೆನೋವಿನಿಂದ ಬಳಲಿದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಅವರಿಗೆ ಆ್ಯಂಜಿಯೊಪ್ಲಾಸ್ಟಿ ಮಾಡಲಾಗುತ್ತಿದೆ ಎಂದು ಹಲವು ರಾಷ್ಟ್ರೀಯ ಜಾಲತಾಣಗಳು ವರದಿ ಮಾಡಿವೆ.

'ಕಪಿಲ್ ದೇವ್ ಅವರು‌ ತಮ್ಮ ಆರೋಗ್ಯ ತಪಾಸಣೆಗೆ ಆಸ್ಪತ್ರೆಗೆ ತೆರಳಿದ್ದಾರೆ. ಇದು ಪ್ರತಿ ತಿಂಗಳ ‌ಪ್ರಕ್ರಿಯೆಯಷ್ಟೇ' ಎಂದು ಅವರ ಆಪ್ತ ಮೂಲಗಳು ಸ್ಪಷ್ಟನೆ ನೀಡಿವೆ.

1983ರ ವಿಶ್ವಕಪ್ ವಿಜಯೀ ಭಾರತ ತಂಡದ ನಾಯಕರಾಗಿದ್ದವರು ಕಪಿಲ್. ಶ್ರೇಷ್ಠ ಆಲ್ ರೌಂಡರ್ ಗಳಲ್ಲಿ ಪ್ರಮುಖರಾಗಿದ್ದಾರೆ. ಅವರಿಗೆ ಈಗ 61 ವರ್ಷಗಳಾಗಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು