ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಂಬಾಬ್ವೆಯ ಮಾಜಿ ಕ್ರಿಕೆಟಿಗ ಹೀತ್ ಸ್ಟ್ರೀಕ್‌ ನಿಧನ ಸುದ್ದಿ ಸುಳ್ಳು: ಒಲಂಗಾ

Published 23 ಆಗಸ್ಟ್ 2023, 4:51 IST
Last Updated 23 ಆಗಸ್ಟ್ 2023, 4:51 IST
ಅಕ್ಷರ ಗಾತ್ರ

ಬೆಂಗಳೂರು: ಜಿಂಬಾಬ್ವೆಯ ಮಾಜಿ ಕ್ರಿಕೆಟಿಗ ಹೀತ್ ಸ್ಟ್ರೀಕ್ ನಿಧನರಾಗಿಲ್ಲ ಎಂದು ವರದಿಗಳು ತಿಳಿಸಿವೆ. 

ಅಂತರರಾಷ್ಟ್ರೀಯ ಮಾಧ್ಯಮಗಳು ಹೀತ್ ಸ್ಟ್ರೀಕ್ ನಿಧನರಾಗಿದ್ದಾರೆ ಎಂದು ವರದಿ ಮಾಡಿದ್ದವು. 

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ದಕ್ಷಿಣ ಆಫ್ರಿಕಾದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ. 

ಹೀತ್ ಸ್ಟ್ರೀಕ್ ಜಿಂಬಾಬ್ವೆ ಪರ 65 ಟೆಸ್ಟ್, 189 ಏಕದಿನ ಪಂದ್ಯಗಳನ್ನು ಆಡಿದ್ದರು. ಈ ಎರಡು ಮಾದರಿಯಲ್ಲಿ ಅವರು 4,933 ರನ್ ಹಾಗೂ 455 ವಿಕೆಟ್ ಪಡೆದಿದ್ದರು. 

ಈ ಹಿಂದೆ ಬಾಂಗ್ಲಾದೇಶ ಕ್ರಿಕೆಟ್ ತಂಡದ ತರಬೇತುದಾರರಾಗಿಯೂ ಹೀತ್ ಸ್ಟ್ರೀಕ್ ಕೆಲಸ ಮಾಡಿದ್ದರು.

ಜಿಂಬಾಬ್ವೆಯ ಮಾಜಿ ಕ್ರಿಕೆಟಿಗ ಹೆನ್ರಿ ಒಲಂಗಾ ಈ ಕುರಿತು ಸ್ಪಷ್ಟನೆ ನೀಡಿದ್ದು, ಹೀತ್ ಸ್ಟ್ರೀಕ್ ನಿಧನ ಸುದ್ದಿ ಸುಳ್ಳು ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT