ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IPL 2022: ರಾಯಲ್ಸ್ ತಂಡಕ್ಕೆ ಮರಳಿದ ಹೆಟ್ಮೆಯರ್

Last Updated 16 ಮೇ 2022, 12:42 IST
ಅಕ್ಷರ ಗಾತ್ರ

ಮುಂಬೈ: ರಾಜಸ್ಥಾನ್ ರಾಯಲ್ಸ್ ಬ್ಯಾಟರ್ ಶಿಮ್ರಾನ್ ಹೆಟ್ಮೆಯರ್ ಮತ್ತೆ ತಂಡಕ್ಕೆ ಮರಳಿದ್ದಾರೆ. ಇದರಿಂದಾಗಿ ಪ್ರಸಕ್ತ ಸಾಲಿನ ಐಪಿಎಲ್‌ನಲ್ಲಿ ರಾಜಸ್ಥಾನ್ ತಂಡವು ಮತ್ತಷ್ಟು ಬಲಿಷ್ಠವೆನಿಸಿದೆ.

ಹೆಟ್ಮೆಯರ್ ಪತ್ನಿ ಮೊದಲ ಮಗುವಿಗೆ ಜನ್ಮ ನೀಡಿದ್ದಾರೆ. ಈ ಸುಸಂದರ್ಭದಲ್ಲಿ ಭಾಗಿಯಾಗಲು ಹೆಟ್ಮೆಯರ್ ಗಯಾನಾಗೆ ತೆರಳಿದ್ದರು.

ಇದರಿಂದಾಗಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಲಖನೌ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯಕ್ಕೆ ಅಲಭ್ಯರಾಗಿದ್ದರು.

ಶುಕ್ರವಾರ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆಯಲಿರುವ ಲೀಗ್ ಹಂತದ ಕೊನೆಯ ಪಂದ್ಯಕ್ಕೆ ಹೆಟ್ಮೆಯರ್ ಲಭ್ಯರಾಗುವ ಸಾಧ್ಯತೆಯಿದೆ.

ತಂಡಕ್ಕೆ ಮರಳಿರುವ ಹೆಟ್ಮೆಯರ್ ಈಗ ಕ್ವಾರಂಟೈನ್‌ನಲ್ಲಿದ್ದಾರೆ ಎಂದು ಐಪಿಎಲ್ ಮೂಲಗಳು ತಿಳಿಸಿವೆ.

ಭಾನುವಾರ ಲಖನೌ ಸೂಪರ್ ಜೈಂಟ್ಸ್ ವಿರುದ್ಧ 24 ರನ್ ಅಂತರದ ಗೆಲುವು ದಾಖಲಿಸಿರುವ ರಾಜಸ್ಥಾನ್, ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದೆ.

25 ವರ್ಷದ ಹೆಟ್ಮೆಯರ್ ಅವರನ್ನು ಐಪಿಎಲ್ ಮೆಗಾ ಹರಾಜಿನಲ್ಲಿ ₹8.5 ಕೋಟಿ ನೀಡಿ ರಾಜಸ್ಥಾನ್ ತಂಡವು ಖರೀದಿಸಿತ್ತು.

ಹೆಟ್ಮೆಯರ್ 11 ಪಂದ್ಯಗಳಲ್ಲಿ 72.75ರ ಸರಾಸರಿಯಲ್ಲಿ 291 ರನ್ ಗಳಿಸಿದ್ದು, 166.29ರ ಸ್ಟ್ರೈಕ್‌ರೇಟ್ ಕಾಪಾಡಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT