ಸೋಮವಾರ, ಸೆಪ್ಟೆಂಬರ್ 27, 2021
22 °C

ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಬ್ರಿಟಿಷ್ ಹೈಕಮಿಷನರ್ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಚಿನ್ನಸ್ವಾಮಿ ಕ್ರಿಕೆಟ್ ಕ್ರೀಡಾಂಗಣ ಮತ್ತು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಗೆ ಬುಧವಾರ ಬ್ರಿಟಿಷ್ ಹೈಕಮಿಷನರ್ ಅಲೆಕ್ಸ್ ಎಲ್ಲಿಸ್ ಭೇಟಿ ನೀಡಿದ್ದರು.

ಈ ಸಂದರ್ಭದಲ್ಲಿ ಅವರು ಎನ್‌ಸಿಎ ಮುಖ್ಯಸ್ಥ ರಾಹುಲ್ ದ್ರಾವಿಡ್ ಅವರನ್ನು ಭೇಟಿ ಮಾಡಿದರು. ಅಕಾಡೆಮಿಯ ಕಾರ್ಯಕ್ರಮಗಳ ಕುರಿತು ತಿಳಿದುಕೊಂಡರು.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಭಿವೃದ್ಧಿಪಡಿಸಲಾಗಿರುವ ಸೌರವಿದ್ಯುತ್ ವ್ಯವಸ್ಥೆ, ಮಳೆ ನೀರು ಸಂಗ್ರಹ ಮತ್ತು ಸಬ್‌ ಏರ್ ಸಿಸ್ಟಮ್‌ಗಳನ್ನು ವೀಕ್ಷಿಸಿದರು.  ಆಟಗಾರರಿಗಾಗಿ ಇರುವ ಮೂಲಸೌಲಭ್ಯಗಳನ್ನು ನೋಡಿದರು.

ಈ ಸಂದರ್ಭದಲ್ಲಿ ಬ್ರಿಟಿಷ್ ಡೆಪ್ಯುಟಿ ಹೈಕಮಿಷನರ್ ಜೆರೆಮಿ ಪಿಲ್ಮೊರ್ ಬೆಡ್‌ಫೋರ್ಡ್, ಕೆಎಸ್‌ಸಿಎ ಅಧ್ಯಕ್ಷ ರೋಜರ್ ಬಿನ್ನಿ,  ಉಪಾಧ್ಯಕ್ಷ ಜೆ. ಅಭಿರಾಮ್, ಕಾರ್ಯದರ್ಶಿ ಸಂತೋಷ್ ಮೆನನ್, ಖಜಾಂಚಿ ವಿನಯ್ ಮೃತ್ಯುಂಜಯ, ಜಂಟಿ ಕಾರ್ಯದರ್ಶಿ ಶಾವೀರ್ ತಾರಾಪೂರ್ ಹಾಜರಿದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು