ಶುಕ್ರವಾರ, 12 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಾರ್ಬಡೋಸ್ | ಅಪ್ಪಳಿಸಿದ ಚಂಡಮಾರುತ: ವಿಮಾನ ನಿಲ್ದಾಣದಲ್ಲಿ ಸಿಲುಕಿದ ಕ್ರಿಕೆಟಿಗರು

Published 1 ಜುಲೈ 2024, 6:01 IST
Last Updated 1 ಜುಲೈ 2024, 6:01 IST
ಅಕ್ಷರ ಗಾತ್ರ

ಬಾರ್ಬಡೋಸ್‌: ಚಂಡಮಾರುತದ ಪರಿಣಾಮ ನಗರದಾದ್ಯಂತ ಭಾರಿ ಮಳೆಯಾಗುತ್ತಿದ್ದು, ವಿಮಾನಗಳ ಹಾರಾಟ ರದ್ದಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಭಾನುವಾರ ಸಂಜೆ 6 ಗಂಟೆಯಿಂದ ಕರ್ಫ್ಯೂ ಹೇರಲಾಗಿದ್ದು, ಎಲ್ಲ ಕಚೇರಿಗಳು ಸೇರಿದಂತೆ ಅಂಗಡಿಗಳನ್ನು ಮುಚ್ಚಲಾಗಿದೆ ಎಂದು ತಿಳಿದು ಬಂದಿದೆ.

ವಿಮಾನಗಳ ಹಾರಾಟ ರದ್ದಾದ ಕಾರಣ ಭಾರತ ಕ್ರಿಕೆಟ್ ತಂಡದ ಆಟಗಾರರು ಮತ್ತು ಮಾಧ್ಯಮದವರು ಬಾರ್ಬಡೋಸ್‌ನಲ್ಲಿ ಸಿಲುಕಿದ್ದಾರೆ.

ಈಚೆಗೆ ಬಾರ್ಬಡೋಸ್‌ನ ಬ್ರಿಜ್‌ಟೌನ್‌ನಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್‌ನಲ್ಲಿ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡವು ದಕ್ಷಿಣ ಆಫ್ರಿಕಾವನ್ನು 7 ರನ್‌ಗಳಿಂದ ಮಣಿಸುವ ಮೂಲಕ 17 ವರ್ಷಗಳ ಬಳಿಕ ಎರಡನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT