ಮಂಗಳವಾರ, ಮೇ 17, 2022
26 °C

ಕೊಹ್ಲಿ ಪುತ್ರಿಗೆ ಅತ್ಯಾಚಾರ ಬೆದರಿಕೆ ಹಾಕಿದ್ದ ಹೈದರಾಬಾದ್ ವ್ಯಕ್ತಿಯ ಬಂಧನ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ನವದೆಹಲಿ: ಭಾರತದ ಏಕದಿನ ಹಾಗೂ ಟೆಸ್ಟ್ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರ ಪುತ್ರಿಗೆ ಅತ್ಯಾಚಾರ ಬೆದರಿಕೆ ಹಾಕಿದ್ದ ಹೈದರಾಬಾದ್ ಮೂಲದ ವ್ಯಕ್ತಿಯನ್ನು ಬಂಧಿಸಲಾಗಿದೆ.

ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ಹಾಗೂ ಪಾಕಿಸ್ತಾನ ನಡುವಣ ಪಂದ್ಯದ ವೇಳೆಯಲ್ಲಿ ಸಾಮಾಜಿಕ ಮಾಧ್ಯಮ ಟ್ವಿಟರ್‌ನಲ್ಲಿ ಅತ್ಯಾಚಾರ ಬೆದರಿಕೆಯನ್ನು ಹಾಕಲಾಗಿತ್ತು.

ಇದನ್ನೂ ಓದಿ: 

ಮುಂಬೈ ಪೊಲೀಸ್‌ನ ವಿಶೇಷ ತಂಡವು ಬುಧವಾರದಂದು ಆರೋಪಿ ರಾಮನಾಗೇಶ್ ಶ್ರೀನಿವಾಸ್ ಅಕುಬತಿನಿ ಎಂಬಾತನನ್ನು ಬಂಧಿಸಿದ್ದಾರೆ.

23 ವರ್ಷದ ರಾಮನಾಗೇಶ್ ಸಾಫ್ಟ್‌ವೇರ್ ಎಂಜಿನಿಯರ್ ಆಗಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಪಾಕಿಸ್ತಾನ ವಿರುದ್ಧ ನಡೆದ ವಿಶ್ವಕಪ್ ಪಂದ್ಯದಲ್ಲಿ ಭಾರತ 10 ವಿಕೆಟ್ ಅಂತರದ ಹೀನಾಯ ಸೋಲಿಗೆ ಶರಣಾಗಿತ್ತು. ವಿಶ್ವಕಪ್‌ನಲ್ಲಿ ಇದೇ ಮೊದಲ ಬಾರಿಗೆ ಪಾಕಿಸ್ತಾನ ವಿರುದ್ಧ ಸೋಲು ಅನುಭವಿಸಿತ್ತು.

ಭಾರತದ ಸೋಲಿನ ಬೆನ್ನಲ್ಲೇ ಮೊಹಮ್ಮದ್ ಶಮಿ ಅವರ ಧರ್ಮವನ್ನು ಉಲ್ಲೇಖಿಸಿ ನಿಂದಿಸಲಾಗಿತ್ತು. ಶಮಿ ಬೆಂಬಲಕ್ಕೆ ನಿಂತಿದ್ದ ಕೊಹ್ಲಿ, ಇದು ಬೆನ್ನುಮೂಳೆ ಇಲ್ಲದವರು ಮಾಡುವ ಕೆಲಸ ಎಂದು ತಿರುಗೇಟು ನೀಡಿದ್ದರು. ಇದರಿಂದಾಗಿ ಕೊಹ್ಲಿ ವಿರುದ್ಧವೂ ನಿಂದನೆ ಎದುರಾಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು