ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

'ಪೂರ್ಣವಾಗಿ ಚೇತರಿಸಿಕೊಂಡಿದ್ದೇನೆ'; ಆಸ್ಪತ್ರೆಯಿಂದ ಬಿಡುಗಡೆಗೊಂಡ ಸೌರವ್ ಗಂಗೂಲಿ

Last Updated 7 ಜನವರಿ 2021, 8:52 IST
ಅಕ್ಷರ ಗಾತ್ರ

ಕೋಲ್ಕತ್ತ: ಲಘು ಹೃದಯಾಘಾತಕ್ಕೊಳಗಾಗಿ ಕೋಲ್ಕತ್ತದ ಖಾಸಗಿ ಆಸ್ಪತ್ರೆಯಲ್ಲಿ ಆ್ಯಂಜಿಯೊಪ್ಲಾಸ್ಟಿ ಚಿಕಿತ್ಸೆಗೆ ಒಳಗಾಗಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ, ಪೂರ್ಣವಾಗಿ ಚೇತರಿಸಿಕೊಂಡಿದ್ದು, ಬುಧವಾರದಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಈ ವೇಳೆ ಅಭಿಮಾನಿಗಳು ಹಾಗೂ ಮಾಧ್ಯಮ ಮಿತ್ರರನ್ನು ಉದ್ದೇಶಿಸಿ ಪ್ರತಿಕ್ರಿಯೆ ನೀಡಿರುವ ಭಾರತದ ಮಾಜಿ ಯಶಸ್ವಿ ನಾಯಕ ಸೌರವ್ ಗಂಗೂಲಿ, ನನಗೆ ಉತ್ತಮ ಚಿಕಿತ್ಸೆ ನೀಡಿದ ವುಡ್‌ಲ್ಯಾಂಡ್ ಆಸ್ಪತ್ರೆ ಹಾಗೂ ವೈದ್ಯರಿಗೆ ಧನ್ಯವಾದಗಳನ್ನು ಹೇಳಲಿಚ್ಛಿಸುತ್ತೇನೆ. ನಾನು ಪೂರ್ಣವಾಗಿ ಚೇತರಿಸಿಕೊಂಡಿದ್ದೇನೆ ಎಂದು ತಿಳಿಸಿದರು.

48 ವರ್ಷದ ಸೌರವ್ ಗಂಗೂಲಿ ಅವರಿಗೆಜನವರಿ 2 ಶನಿವಾರದಂದು ವ್ಯಾಯಾಮನಡೆಸುತ್ತಿದ್ದ ವೇಳೆ ಲಘು ಹೃದಯಾಘಾತ ಕಾಣಿಸಿಕೊಂಡಿತ್ತು. ಅವರ ಹೃದಯದ ರಕ್ತನಾಳಗಳಲ್ಲಿ ಬ್ಲಾಕ್‌ಗಳು ಕಂಡುಬಂದ ಕಾರಣ ಆ್ಯಂಜಿಯೊಪ್ಲಾಸ್ಟಿ ನಡೆಸಿ, ಒಂದು ಕಡೆ ಸ್ಟಂಟ್ ಆಳವಡಿಸಲಾಗಿತ್ತು.

ಒಂಬತ್ತು ಸದಸ್ಯರ ಹಿರಿಯ ವೈದ್ಯರ ತಂಡವು ಸೌರವ್ ಗಂಗೂಲಿ ಆರೋಗ್ಯದ ಮೇಲೆ ನಿಗಾ ವಹಿಸಿತ್ತು. ಈಗ ಆದಷ್ಟು ಶೀಘ್ರದಲ್ಲೇ ಸಹಜ ದೈನಂದಿನ ಚಟುವಟಿಕೆಗಳಿಗೆ ಮರಳುವ ನಿರೀಕ್ಷೆಯಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT